Advertisement

Tulu Language 8ನೇ ಪರಿಚ್ಛೇದಕ್ಕೆ ತುಳು: ಕ್ಯಾ| ಚೌಟ ಪ್ರಶ್ನೆ

11:53 PM Aug 06, 2024 | Team Udayavani |

ಮಂಗಳೂರು: ತುಳು ಭಾಷೆಯನ್ನು 8 ನೇ ಪರಿಚ್ಛೇದಕ್ಕೆ ಸೇರಿಸಬೇಕೆಂಬ ಬೇಡಿಕೆಯು ಸರಕಾರದ ಗಮನಕ್ಕೆ ಬಂದಿದೆ ಎಂದು ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ನಿತ್ಯಾನಂದ ರೈ ಅವರು ತಿಳಿಸಿದ್ದಾರೆ.

Advertisement

ಈ ಸಂಬಂಧಿತ ಸಂಸದ ಕ್ಯಾ| ಬ್ರಿಜೇಶ್‌ ಚೌಟ ಅವರ ಪ್ರಶ್ನೆಗೆ ಸದನದಲ್ಲಿ ಲಿಖೀತ ಉತ್ತರ ನೀಡಿರ ುವ ಸಚಿವರು, ತುಳು ಸೇರಿ ದಂತೆ ಇನ್ನಿತರ ಹಲವು ಭಾಷೆಗಳು 8 ನೇ ಪರಿಚ್ಛೇದಕ್ಕೆ ಸೇರಿಸಲು ಕಾಲಕಾಲಕ್ಕೆ ಬೇಡಿಕೆಗಳು ಬರುತ್ತಿವೆ. ಯಾವುದೇ ಭಾಷೆಯನ್ನು ಎಂಟನೇ ಪರಿಚ್ಚೇದಕ್ಕೆ ಸೇರಿಸಲು ಸ್ಥಿರ ಮಾನ ದಂಡಗಳಿಲ್ಲ. ಹಾಗೆಯೇ ನಿರ್ದಿಷ್ಟ ಮಾನದಂಡ ವಿಧಿಸುವುದೂ ಕಷ್ಟಕ ರವಾಗಿದೆ. ಆದರೆ ತುಳು ಸಹಿತ ಇತರ ಭಾಷೆಗಳನ್ನು 8ನೇ ಪರಿಚ್ಛೇದಕ್ಕೆ ಸೇರಿಸಬೇಕೆಂಬ ಬೇಡಿಕೆಗಳು ಹಾಗೂ ಅದರ ಅಗತ್ಯದ ಬಗ್ಗೆ ಸರಕಾರ ಜಾಗೃತವಾಗಿದೆ ಎಂದು ತಿಳಿಸಿದ್ದಾರೆ.

ತುಳುವನ್ನು 8ನೇ ಪರಿಚ್ಛೇದಕ್ಕೆ ಸೇರಿಸುವಂತೆ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಭಾಗದ ಜನರು ಒತ್ತಾಯಿಸುತ್ತಿರುವುದು ಸರಕಾರದ ಗಮನದಲ್ಲಿ ಇದೆಯೇ ? ಯಾವೆಲ್ಲ ಕ್ರಮ ಕೈಗೊಳ್ಳಲಾಗಿದೆ ? ಎಂದು ಸಂಸದ ಪಹ್ವಾ (1996) ಮತ್ತು ಸೀತಾಕಾಂತ್‌ ಮೊಹಾಪತ್ರ (2003) ಸಮಿತಿಯ ಪ್ರಯತ್ನಗಳನ್ನು ಗಮನದಲ್ಲಿಟ್ಟುಕೊಂಡು 8ನೇ ಪರಿಚ್ಛೇದದ ಅಡಿಯಲ್ಲಿ ಹೆಚ್ಚಿನ ಭಾಷೆಗಳ ಸೇರ್ಪಡೆಗಾಗಿ ವಿನಂತಿಗಳನ್ನು ಪರಿಗಣಿಸಲು ಯಾವೆಲ್ಲ ಪ್ರಯತ್ನಗಳನ್ನು ತೆಗೆದುಕೊಳ್ಳಲಾಗಿದೆ ? ಎಂದು ಚೌಟ ಪ್ರಶ್ನಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next