Advertisement

ತುಳು ಭಾಷೆಗೆ ಅಧಿಕೃತ ಮಾನ್ಯತೆ; ಟ್ವೀಟ್ ಅಭಿಯಾನದಲ್ಲಿ 1 ಲಕ್ಷಕ್ಕೂ ಹೆಚ್ಚಿನ ಟ್ವೀಟ್ ದಾಖಲು

03:03 PM Jun 13, 2021 | Team Udayavani |

ಮಂಗಳೂರು: ತುಳು ಭಾಷೆಯನ್ನು ಕರ್ನಾಟಕ ಮತ್ತು ಕೇರಳ ಸರಕಾರ ಅಧಿಕೃತ ರಾಜ್ಯ ಭಾಷೆಯನ್ನಾಗಿ ಮಾಡಬೇಕು ಎಂದು ಒತ್ತಾಯಿಸಿ ಜೈ ತುಳುನಾಡು ಸೇರಿದಂತೆ ಇತರೇ ಸಂಘಟನೆಗಳು ಮತ್ತು ತುಳು ಭಾಷಿಗರಿಂದ ರವಿವಾರದಂದು ಟ್ವಿಟರ್ ಅಭಿಯಾನ ಆರಂಭಗೊಂಡಿದೆ.

Advertisement

ರವಿವಾರ ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಆಯೋಜಿಸಲಾದ ಟ್ವೀಟ್ ಅಭಿಯಾನಕ್ಕೆ ಸಾವಿರಾರು ಮಂದಿ ಟ್ವೀಟ್ ಮಾಡಿ ಬೆಂಬಲ ಸೂಚಿಸಿದ್ದಾರೆ.

ಇದನ್ನೂ ಓದಿ: ಚಾರ್ಮಾಡಿ ಘಾಟಿಯಲ್ಲಿ ವಾನರ ಪಡೆಗೆ ಬಾಳೆಹಣ್ಣು ನೀಡಿದ ನಳಿನ್ ಕುಮಾರ್ ಕಟೀಲ್

ತುಳುಭಾಷೆಯ ಸ್ಥಾನಮಾನಕ್ಕಾಗಿ ಈ ಹಿಂದೆಯೂ ಟ್ವೀಟ್‌ ಅಭಿಯಾನ ನಡೆಸಿ ರಾಜ್ಯ ಸರಕಾರಕ್ಕೆ ಮನವಿ ಮಾಡಲಾಗಿತ್ತು. ಅಲ್ಲದೆ, ತುಳು ಸಾಹಿತ್ಯ ಅಕಾಡೆಮಿ, ಜನಪ್ರತಿನಿಧಿಗಳು ಗಣ್ಯರು ಕೂಡ ರಾಜ್ಯ, ಕೇಂದ್ರ ಸರಕಾರವನ್ನು ಒತ್ತಾಯಿಸಿದ್ದರು. ಆದರೆ ಸರಕಾರ ಮಾತ್ರ ಈ ‌ಬಗ್ಗೆ ಮನಸ್ಸು ಮಾಡಿಲ್ಲ.

ಟ್ವೀಟ್ ಅಭಿಯಾನದಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ 1 ಲಕ್ಷಕ್ಕೂ ಹೆಚ್ಚಿನ ಟ್ವೀಟ್ ಗಳು ದಾಖಲಾಗಿವೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next