Advertisement
ಬಳಿಕ ಕಾರ್ಯಕ್ರಮದ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕಾಗಿ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ)ಗೆ 50 ಎಕರೆ ಭೂಮಿ ಮಂಜೂರು ಮಾಡಿದ್ದೇವೆ. ಈ ಉಪಕ್ರಮ ಈ ಪ್ರದೇಶದ ಆರ್ಥಿಕ ಬೆಳವಣಿಗೆ ಮತ್ತು ಒಟ್ಟಾರೆ ಅಭಿವೃದ್ಧಿಗೆ ಕೊಡುಗೆ ನೀಡುತ್ತದೆ ಎಂದು ಕೆಎಸ್ ಸಿಎಗೆ 50 ಎಕರೆ ಪ್ರದೇಶವನ್ನು ಸಿಎಂ ಸಿದ್ದರಾಮಯ್ಯ ಹಸ್ತಾಂತರಿಸಿದರು. ಕ್ರಿಕೆಟ್ ಆಸಕ್ತರ ನಿರೀಕ್ಷೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕೆಎಸ್‌ಸಿಎ ನಿರ್ಮಾಣವನ್ನು ತ್ವರಿತಗೊಳಿಸಬೇಕು ಎಂದು ಇದೇ ವೇಳೆ ಒತ್ತಾಯಿಸಿದ್ದಾರೆ.
ಮೈಸೂರಿನಲ್ಲೂ ಕಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಬೇಡಿಕೆ ಮುಂದಿಟ್ಟಿದೆ. ಮೈಸೂರಿನಲ್ಲೂ ಜಾಗ ಕೊಡಲಾಗುವುದು ಮೈಸೂರಿನಲ್ಲೂ ಇದೇ ಯೋಜನೆಗೆ ಭೂಮಿ ಮಂಜೂರು ಮಾಡುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದರು. ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ, ಸಹಕಾರ ಸಚಿವ ಕೆ.ಎನ್.ರಾಜಣ್ಣ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯ ಸರಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಸ್ಥಳೀಯ ಶಾಸಕರು, ಕೆಎಸ್‌ಸಿಎ ಅಧ್ಯಕ್ಷ ರಘುರಾಮ ಭಟ್ ಸೇರಿ ಅಧಿಕಾರಿಗಳು ಉಪಸ್ಥಿತರಿದ್ದರು.
Related Articles
Advertisement
ಪ್ರತಿಭಟನೆಗೆಲ್ಲ ಹೆದರಲ್ಲ:ತುಮಕೂರು ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಸಂದರ್ಭದಲ್ಲಿ ಪ್ರತಿಭಟನೆ ನಡೆಸಲು ಹಣದ ಆಮಿಷ ಒಡ್ಡಿರುವ ಸುದ್ದಿ ನೋಡಿದೆ. ನಾನು 41 ವರ್ಷದಿಂದ ಮಂತ್ರಿ ಆಗಿದ್ದೇನೆ. ಎರಡು ಬಾರಿ ವಿರೋಧ ಪಕ್ಷದ ನಾಯಕ, ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೀನಿ. ಇಂಥಾದ್ದಕ್ಕೆಲ್ಲಾ ಹೆದರಿದ್ದರೆ ರಾಜಕಾರಣದಲ್ಲಿ ಉಳಿಯೋಕೆ ಆಗ್ತಿರಲಿಲ್ಲ. ಯಾವ ತಪ್ಪು ಮಾಡದ ನಾನು ಯಾವುದಕ್ಕೂ ಹೆದರುವ ಪ್ರಶ್ನೆಯೇ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದರು.