Advertisement
ನಗರದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಚರ್ಡ್ ಮದ್ಯವರ್ಜನ ಹಾಗೂ ಸಮಗ್ರ ಪುನರ್ವ ಸತಿ ಕೇಂದ್ರಗಳ ಸಹಯೋಗದಲ್ಲಿ ನಗರದ ಅಚರ್ಡ್ ಕೇಂದ್ರದಲ್ಲಿ ಬುಧವಾರ ಮಾದಕ ವಸ್ತುಗಳ ದುರ್ಬಳಕೆ ಹಾಗೂ ಅಕ್ರಮ ಸಾಗಾಟದ ವಿರೋಧಿ ಅಂತಾರಾಷ್ಟ್ರೀಯ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಮಾದಕ ವಸ್ತುಗಳ ದುರ್ಬಳಕೆ ಹಾಗೂ ಕಳ್ಳಸಾಗಾಣಿಕೆ ದಿನೆದಿನೇ ಹೆಚ್ಚಾಗುತ್ತಿದೆ ಎಂದು ಹೇಳಿದರು. ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆ ಯಲ್ಲಿ ಮಾದಕ ವಸ್ತುಗಳ ದುಶ್ಚಟಕ್ಕೆ ಬಲಿಯಾಗು ತ್ತಿದ್ದಾರೆ. ಮಾದಕ ವಸ್ತುಗಳ ದುರ್ಬಳಕೆ ಹಾಗೂ ಕಳ್ಳ ಸಾಗಣಿಕೆ ವಿರುದ್ಧ ಕಟ್ಟುನಿಟ್ಟಿನ ಕಾಯ್ದೆಗಳಿದ್ದರೂ ಹೊಲಗಳಲ್ಲಿ ಗಾಂಜಾ ಬೆಳೆಯುವುದು ನಿಂತಿಲ್ಲ. ಗಾಂಜಾ ಬೆಳೆಗೆ ಸಂಬಂಧಿ ಸಿದಂತೆ ಕಳೆದ 6 ತಿಂಗಳಲ್ಲಿ ಹೆಚ್ಚಿನ ಪ್ರಕರಣಗಳು ನ್ಯಾಯಾಲಯದ ಮುಂದೆ ಬಂದಿವೆ ಎಂದು ಹೇಳಿದರು.
Related Articles
Advertisement
ಇಲಾಖೆಯ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಮಾದಕ ವಸ್ತುಗಳ ಅಕ್ರಮ ಸಾಗಾಟದ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ತರಬೇತಿ ನೀಡ ಲಾಗುತ್ತಿದೆ. ಮಾದಕ ವಸ್ತುಗಳ ಸೇವನೆ ಒಂದು ಸಾಮಾಜಿಕ ಪಿಡುಗಾಗಿದ್ದು, ಇದನ್ನು ತಡೆಗಟ್ಟಲು ಯುವ ಜನಾಂಗ ಮುಂದಾಗಬೇಕು ಎಂದು ತಿಳಿಸಿ ದರು. ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪ್ರೇಮ್‌ಕುಮಾರ್ ಮಾತನಾಡಿ, 15ರಿಂದ 20 ವರ್ಷ ವಯೋಮಾನದವರು ಈ ದುಶ್ಚಟಕ್ಕೆ ಬಲಿ ಯಾಗುತ್ತಿ ದ್ದಾರೆ. ಓದಬೇಕಾದ ವಯಸ್ಸಿನಲ್ಲಿ ಕುತೂ ಹಲಕ್ಕಾಗಿ ಮಾದಕ ವ್ಯಸನಿಗಳಾಗುತ್ತಿದ್ದಾರೆ. ಅಲ್ಲದೆ ಮಾನಸಿಕ ಒತ್ತಡಕ್ಕೊಳಗಾದವರು ಧ್ಯಾನ, ಹಿರಿಯರ ಮಾರ್ಗ ದರ್ಶನ ಮತ್ತಿತರ ಮಾರ್ಗ ಅನುಸರಿಸದೆ ಮದ್ಯ ಸೇವನೆಯಂತಹ ದುಶ್ವಟ ಬೆಳೆಸಿಕೊಳ್ಳುತ್ತಿದ್ದಾರೆ. ಸಿನಿಮಾ, ಸಾಮಾಜಿಕ ಜಾಲತಾಣಗಳಲ್ಲಿರುವ ಋಣಾ ತ್ಮಕ ಅಂಶ ಗಣನೆಗೆ ತೆಗೆದುಕೊಳ್ಳದೆ ಧನಾತ್ಮಕ ಅಂಶ ಮಾತ್ರ ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಕುಷ್ಠರೋಗ ನಿಯಂತ್ರಣ ಮತ್ತು ಮಾನಸಿಕ ರೋಗ ನಿವಾರಣಾಧಿಕಾರಿ ಡಾ. ಚೇತನ್ ಮಾತನಾಡಿ, ಮಾದಕ ವಸ್ತುಗಳ ಅಕ್ರಮ ಮಾರಾಟದ ಜಾಲ ನಗರದಲ್ಲಿ ಮಾತ್ರ ಹರಡಿದ್ದು, ವ್ಯಸನಿಗಳ ಸಂಖ್ಯೆ ಹೆಚ್ಚಾದಂತೆ ಮುಂದಿನ ದಿನಗಳಲ್ಲಿ ತಾಲೂಕು ಕೇಂದ್ರಗಳಲ್ಲಿಯೂ ತನ್ನ ಜಾಲವನ್ನು ಹರಡುವ ಸಾಧ್ಯತೆ ಇದೆ ಎಂದು ಹೇಳಿದರು.
ದೂರವಿರುವುದೇ ಲೇಸು: ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನೋವೈದ್ಯ ಡಾ.ಶರತ್ ವಿಶ್ವರಾಜ್ ಮಾತನಾಡಿ, ಡಿ-ಅಡಿಕ್ಷನ್ ಕೇಂದ್ರಗಳಲ್ಲಿ ಮಾದಕ ವ್ಯಸನಿಗಳನ್ನು ವ್ಯಸನಮುಕ್ತರನ್ನಾಗಿಸ ಬಹುದು. ಕುತೂಹಲಕ್ಕೆ ಆರಂಭವಾಗುವ ಮಾದಕ ಸೇವನೆ ನಂತರ ಚಟವಾಗಿ ಬೆಳೆಯುತ್ತದೆ.
ಈ ಚಟ ಬಿಟ್ಟಾಗ ದೇಹದಲ್ಲಿ ವಿಚಿತ್ರ ಅನುಭವ ಅನುಭವ ಗಳಾಗುತ್ತವೆ. ಈ ನಿಟ್ಟಿನಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮ ಅರಿತು ಅದರಿಂದ ದೂರ ವಿರುವುದೇ ಲೇಸು. ಉತ್ತಮ ಅಭಿರುಚಿ ಬೆಳೆಸಿ ಕೊಂಡಲ್ಲಿ ಆರೋಗ್ಯಕರ ಹಾಗೂ ನೆಮ್ಮದಿಯುತ ಜೀವನ ನಮ್ಮದಾಗುತ್ತದೆ ಎಂದು ಸಲಹೆ ನೀಡಿದರು. ಅಚರ್ಡ್ ಮದ್ಯವರ್ಜನ ಮತ್ತು ಪುನರ್ವಸತಿ ಕೇಂದ್ರದಲ್ಲಿ ವ್ಯಸನ ಮುಕ್ತರಾದವರು ಅನುಭವ ಹಂಚಿಕೊಂಡರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷೆ ಜಿ.ಕೆ.ಅನಿಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಟರಾಜು, ಜಿಲ್ಲಾ ಹಿರಿಯ ನಾಗರಿಕರ ಮತ್ತು ವಿಕಲಚೇತನರ ಕಲ್ಯಾಣಾಧಿಕಾರಿ ರಮೇಶ್, ಅಚರ್ಡ್ ಸಂಸ್ಥೆಯ ನಿರ್ವಾಹಕ ನಿರ್ದೇಶಕ ಡಾ.ಎಚ್.ಜಿ. ಸದಾಶಿವಯ್ಯ, ಕಾರ್ಯದರ್ಶಿ ಮಾಲಾ ಸದಾಶಿವಯ್ಯ ಇದ್ದರು.