Advertisement
ಒಳಹರಿವು ಸಾಕಷ್ಟು ಇರುವುದರಿಂದ ತುಂಬೆ ಅಣೆಕಟ್ಟಿನಲ್ಲಿ ಈಗ 5 ಮೀ. ನೀರಿನ ಮಟ್ಟವನ್ನು ಕಾಯ್ದುಕೊಳ್ಳಲಾಗುತ್ತಿದೆ. ಒಂದು ಗೇಟನ್ನು ತೆರೆದು ಹೆಚ್ಚುವರಿ ನೀರನ್ನು ಹೊರಬಿಡಲಾಗುತ್ತಿದೆ.
ಉಡುಪಿ: ನಗರಕ್ಕೆ ನೀರು ಪೂರೈಕೆ ಮಾಡುವ ಬಜೆ ಅಣೆಕಟ್ಟಿನಲ್ಲಿ ನೀರಿನ ಹೊರಹರಿವು ಪ್ರಾರಂಭವಾಗಿದೆ. ಶುಕ್ರವಾರ ಸಂಜೆ ನೀರಿನ ಮಟ್ಟ 6.6 ಮೀಟರ್‌ಗೆ ಏರಿಕೆಯಾಗಿದ್ದು, ಹೆಚ್ಚುವರಿ ನೀರನ್ನು ಹೊರಬಿಡಲಾಗಿದೆ.
ನಗರದಲ್ಲಿ ಜೂ. 10ರ ಬಳಿಕ ಮಳೆಯಾಗುತ್ತಿರುವ ಪರಿಣಾಮ ಸ್ವರ್ಣ ನದಿಯಲ್ಲಿ ನೀರು ಹರಿದು ಬರುತ್ತಿದೆ. ಕಾರ್ಕಳದ ಮುಂಡ್ಲಿ ಅಣೆಕಟ್ಟಿಗೆ ಹಾಕಲಾದ ಗೇಟು ತೆರೆಯಲಾಗಿದೆ. ಇದರ ಪರಿಣಾಮ ನೀರು ಹೆಚ್ಚಿನ ಪ್ರಮಾಣದಲ್ಲಿ ಹರಿದು ಬಂದಿದೆ. ಮೇ 5ರಂದು ಬಜೆಗೆ ಬರುವ ನೀರು ಸ್ಥಗಿತಗೊಂಡ ಪರಿಣಾಮ ನಗರದಲ್ಲಿ ನೀರಿನ ಸಮಸ್ಯೆ ಎದುರಾಗಿತ್ತು. ಕಳೆದೊಂದು ತಿಂಗಳಿನಿಂದ ನಗರಸಭೆ 35 ವಾರ್ಡ್ ಗಳನ್ನು 6 ವಿಭಾಗಗಳಾಗಿ ವಿಂಗಡಿಸಿ ಆರು ದಿನಕ್ಕೊಮ್ಮೆ ನೀರು ಸರಬರಾಜು ಮಾಡಲಾಗಿತ್ತು.
ಜೂ. 23ರಿಂದ ನಿರಂತರ ನೀರು ಸರಬರಾಜು ಮಾಡಲಾಗುವುದು ಎಂದು ಪೌರಾಯುಕ್ತರು ತಿಳಿಸಿದ್ದಾರೆ.