Advertisement

Tumkur; ಕೆರೆ ಅಂಗಳದಲ್ಲಿ ಸುಟ್ಟ ಕಾರು; ಗುರುತು ಸಿಗದ ರೀತಿ ಮೂವರ ಮೃತದೇಹಗಳ ಪತ್ತೆ

04:54 PM Mar 22, 2024 | Team Udayavani |

ತುಮಕೂರು: ಕೆರೆಯ ಅಂಗಳದಲ್ಲಿ ಕಾರೊಂದು ಸುಟ್ಟಿದ್ದು ಕಾರಿನಲ್ಲಿ ಮೂವರು ಮೃತ ದೇಹಗಳು ಪತ್ತೆಯಾಗಿರುವ ಘಟನೆ ತುಮಕೂರು ಸಮೀಪ ನಡೆದಿದೆ. ತುಮಕೂರು ತಾಲೂಕಿನ ಕೋರ ಹೋಬಳಿಯ ಕುಚ್ಚಂಗಿ ಕೆರೆಯಲ್ಲಿ ಮೃತದೇಹಗಳು ಪತ್ತೆಯಾಗಿವೆ.

Advertisement

ಸುಟ್ಟ ಕಾರಿನಲ್ಲಿ ಮೂರು ಮೃತದೇಹಗಳು ಗುರುತು ಪತ್ತೆಯಾಗದ ರೀತಿಯಲ್ಲಿ ಸುಟ್ಟು ಹೋಗಿವೆ. ಸುಟ್ಟ ಕಾರು ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಪಟ್ಟಿದ್ದಾಗಿದ್ದು, ಕಾರು ಸಂಪೂರ್ಣ ಸುಟ್ಟು ಹೋಗಿದೆ. ಇಂದು ಸಾರ್ವಜನಿಕರು ಕೆರೆಗೆ ಭೇಟಿ ನೀಡಿದಾಗ ಘಟನೆ ಬೆಳಕಿಗೆ ಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳಾದ ಅಶೋಕ್.ಕೆ.ವಿ, ಅಡಿಷನಲ್ ಎಸ್ಪಿ ಮರಿಯಪ್ಪ, ಡಿವೈಎಸ್ಪಿ ಚಂದ್ರಶೇಖರ್ ಸೇರಿದಂತೆ ಹಲವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸ್ಥಳಕ್ಕೆ ಶ್ವಾನದಳ ಹಾಗೂ ಎಫ್ ಎಸ್ ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಘಟನೆ ಸಂಭಂದ ಪೊಲೀಸರು ಎಲ್ಲಾ ಆಯಾಮದಲ್ಲೂ ತನಿಖೆ ನಡೆಸುತ್ತಿದ್ದು ಕಾರಿನಲ್ಲಿ ಪತ್ತೆಯಾಗಿರುವ ಮೃತದೇಹಗಳ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next