ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮಗಳು ಮತ್ತು ಅಭಿವೃದ್ಧಿಗೆ ಬಿಜೆಪಿಯ ಕೇಂದ್ರ ಮತ್ತು ರಾಜ್ಯ ಸರ್ಕಾ ರಗಳು ಆದ್ಯತೆ ನೀಡಿವೆ ಎಂದು ಬಿಜೆಪಿ ಹಿಂದುಳಿದ ವರ್ಗ ಗಳ ಮೋರ್ಚಾದ ನಗರಾಧ್ಯಕ್ಷ ಎಚ್.ಹನುಮಂತರಾಜು ತಿಳಿಸಿದರು.
ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಹಿಂದುಳಿದ ವರ್ಗಗಳ ಮೋರ್ಚಾದ ತುಮಕೂರು ನಗರ ಕಾರ್ಯಕಾರಿಣಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಿಜೆಪಿ ಸರ್ಕಾರ ಹಿಂದುಳಿದ ವರ್ಗಗಳ ಕ್ರಿಯಾಭಿವೃದ್ಧಿಗೆ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿದೆ ಎಂದರು. ಹಿಂದುಳಿದ ವರ್ಗದವರಿಗೆ ಆದ್ಯತೆ ಮೇಲೆ ಕ್ರಿಯಾ ಯೋಜನೆ ರೂಪಿಸಿ ಕೇಂದ್ರ-ರಾಜ್ಯ ಸರ್ಕಾರಗಳು ಶಿಕ್ಷಣ, ವಸತಿ, ಆರೋಗ್ಯ, ಉದ್ಯೋಗಾವಕಾಶ, ಆರ್ಥಿಕ ಚಟುವಟಿಕೆಗಳು, ಮಹಿಳೆಯರನ್ನು ಆರ್ಥಿಕ ಸ್ವಾವಲಂಬಿಗೊಳಿಸುವುದು, ಯುವಕ, ಯುವತಿಯ ಕೌಶಲ್ಯ ತರಬೇತಿಗಳ ಮೂಲಕ ಸಮಾಜದ ಮುಖ್ಯವಾಹಿನಿಗೆ ತರುವ ಸರ್ವ ಪ್ರಯತ್ನ ಮಾಡುತ್ತಿವೆ ಎಂದು ತಿಳಿಸಿದರು.
ರಾಜ್ಯ ಹಿಂದುಳಿದ ಮೋರ್ಚಾದ ಕಾರ್ಯಕಾರಿಣಿ ಸದಸ್ಯ ಎಂ.ವೈ.ರುದ್ರೇಶ್ ಮಾತನಾಡಿ, ಹಿಂದುಳಿದ ವರ್ಗಗಳ ಸಂಘಟನೆಯ ಮೂಲಕ ನಾವು ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ಮುಟ್ಟಿಸುವ ಕೆಲಸವನ್ನು ನಾವು ಮಾಡಬೇಕು. ಬೂತ್ ಮಟ್ಟದಲ್ಲಿ ಇರುವ ಕಾರ್ಯಕರ್ತರೊಂದಿಗೆ ಸೇರಿ ಪಕ್ಷವನ್ನು ಬಲಿಷ್ಠಗೊಳಿಸಲು ಎಲ್ಲರೂ ಶ್ರಮಿಸಬೇಕು ಎಂದು ನುಡಿದರು.
ಸಭೆಯಲ್ಲಿ ರಾಜ್ಯ ಒಬಿಸಿ ಕಾರ್ಯಕಾರಿಣಿ ಸದಸ್ಯರು ಹಾಗೂ ಜಿಲ್ಲಾ ಒಬಿಸಿ ಪ್ರಭಾರಿಗಳಾದ ಪ್ರೇಮನಾಗಯ್ಯ, ರಾಜ್ಯ ಹಿಂದುಳಿದ ಮೋರ್ಚಾದ ಕಾರ್ಯಕಾರಿಣಿ ಸದಸ್ಯ ಎಂ.ವೈ.ರುದ್ರೇಶ್, ಜಿಲ್ಲಾ ಹಿಂದುಳಿದ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಕೆ.ವೇದಮೂರ್ತಿ ಹಾಗೂ ಗೋಕುಲ್ ಮಂಜುನಾಥ್, ಜಿಲ್ಲಾ ಸಂಯೋಜಕರಾದ ಚಂದನ್‌ಕುಮಾರ್, ತುಮಕೂರು ನಗರ ಒಬಿಸಿ ಪ್ರಭಾರಿ ಶ್ರೀನಿವಾಸ್, ನಗರ ಒಬಿಸಿ ಪದಾಧಿಕಾರಿಗಳಾದ ಉಪೇಂದ್ರಕುಮಾರ್, ಸೌಮ್ಯಶ್ರೀ, ಹರಿಪ್ರಸಾದ್, ದೇವರಾಜ್, ಮೋಹನ್ ರಾವತ್, ಜಯರಾಮಯ್ಯ, ಗೋಪಾಲ್, ರಾಮ ಚನ್ನಯ್ಯ, ರವಿ, ನಾಗೇಶ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ನಗರ ಒಬಿಸಿ ಪ್ರಧಾನ ಕಾರ್ಯದರ್ಶಿ ರಂಗನಾಥ್ ಸ್ವಾಗತಿಸಿ, ವಂದಿಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನಪರ ಕಾರ್ಯಕ್ರಮಗಳನ್ನು ಮನೆ ಮನೆಗೆ ತೆರಳಿ ಜನರಿಗೆ ತಿಳಿಸುವ ಕೆಲಸವನ್ನು ನಾವೆಲ್ಲರೂ ಮಾಡಬೇಕು. 2023 ರ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಲು ಎಲ್ಲರೂ ಸೇರಿ ಶ್ರಮಿಸಬೇಕಾಗಿದೆ.
-ಕೆ.ವೇದಮೂರ್ತಿ, ಪ್ರಧಾನ ಕಾರ್ಯದರ್ಶಿ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ