Advertisement
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲ ಕಡೆ ವ್ಯಾಪಕವಾಗಿ ಹರಡುತ್ತಿದ್ದ ಕೋವಿಡ್ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ದಿಂದ ಹಾಸಿಗೆ, ಆಮ್ಲಜನಕ ಹಾಗೂ ವೈದ್ಯಕೀಯ ಚಿಕಿತ್ಸೆ ಸೇರಿದಂತೆ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ, ಎಲ್ಲ ರೀತಿಯಲ್ಲಿಯೂ ಕ್ರಮ ಕೈಗೊಂಡ ಪರಿಣಾಮ ಕೋವಿಡ್ ನಿಯಂತ್ರಣ ದಲ್ಲಿ ಸುಧಾರಣೆ ಕಂಡು ಬಂದಿದೆ. ಸೋಂಕಿತರ ಚೇತರಿಕೆ ಪ್ರಮಾಣವೂ ಏರಿಕೆಯಾಗುತ್ತಿದೆ ಎಂದರು.
Related Articles
Advertisement
ಜಿಲ್ಲೆಗೆ 23ಕೆಎಲ್ ಆಮ್ಲಜನಕದ ಅಗತ್ಯವಿದ್ದು, ಸದ್ಯ 16ಕೆಎಲ್ ಮಾತ್ರ ಲಭ್ಯವಿದೆ. ಕೊರತೆಯಿರುವ ಆಮ್ಲಜನಕದ ಬೇಡಿಕೆ ಪೂರೈಸುವಂತೆ ಮನವಿ ಮಾಡಿದ್ದರಿಂದ 23ಕೆಎಲ್ ಆಮ್ಲಜನಕ ಹಂಚಿಕೆಯಾಗಿದ್ದು, ಅಗತ್ಯಕ್ಕನುಗುಣವಾಗಿ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ ಸೇರಿದಂತೆ ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಗೆ ಮಾಡಲಾಗುವುದು ಎಂದು ತಿಳಿಸಿದರು. ಕೋವಿಡ್ ಪರೀಕ್ಷೆ ಸುಸೂತ್ರ: ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆ ಸುಸೂತ್ರವಾಗಿ ನಡೆಯುತ್ತಿದೆ. ತುಮಕೂರು ಹಾಗೂ ತಿಪಟೂರಿನಲ್ಲಿ ಲ್ಯಾಬ್‌ಗಳಿದ್ದು, ತುಮಕೂರಿನ ಲ್ಯಾಬ್‌ನಲ್ಲಿ ಎರಡೂವರೆ ಸಾವಿರ ಮತ್ತು ತಿಪಟೂರು ಲ್ಯಾಬ್‌ನಲ್ಲಿ ಒಂದೂವರೆ ಸಾವಿರ ಪರೀಕ್ಷೆ ಮಾಡಲಾಗುತ್ತಿದೆ. ಇದಲ್ಲದೆ ಶಿರಾದಲ್ಲೂ ಲ್ಯಾಬ್ ತೆರೆಯಲು ಯೋಜನೆ ರೂಪಿಸಲಾಗಿದ್ದು, ಶೀಘ್ರ ಪ್ರಾರಂಭವಾಗಲಿದೆ. ಈ ಲ್ಯಾಬ್‌ನಲ್ಲಿಯೂ ಒಂದು ಸಾವಿರ ಕೋವಿಡ್ ಪರೀಕ್ಷೆ ಮಾಡಬಹುದು. ಇದಲ್ಲದೆ, ಲ್ಯಾಬ್ ಆನ್ ರೋಡ್ ವಾಹನದ ಮೂಲಕವೂ ಸ್ಥಳಕ್ಕೆ ಹೋಗಿ ಟೆಸ್ಟಿಂಗ್ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಅಗತ್ಯ ವಸ್ತುಗಳ ನೆರವಿಗೆ ಕ್ರಮ: ಕುಟುಂಬ ಸದಸ್ಯರೆಲ್ಲರಿಗೂ ಸೋಂಕು ತಗುಲಿದ್ದರೆ ಅವರಿಗೆ ಊಟ-ತಿಂಡಿ, ಔಷಧ ಸೇರಿದಂತೆ ಅಗತ್ಯ ವಸ್ತುಗಳ ಪೂರೈಕೆಗೂ ಜಿಲ್ಲಾಡಳಿತದಿಂದ ಕ್ರಮ ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಸೇವೆಗೆ ಮುಂದಾಗಿರುವ 350 ಎನ್ ಜಿಒಗಳನ್ನು ಗುರುತಿಸಿ ಆಯ್ಕೆ ಮಾಡಲಾಗಿದೆ. ಗ್ರಾಮೀಣ ಭಾಗದಲ್ಲಿ ಆಶಾ-ಅಂಗನವಾಡಿ ಕಾರ್ಯ ಕರ್ತೆ ಯರ ಸಹಕಾರ ದೊರಕಿದೆ. ಆಮ್ಲಜನಕ, ರೆಮ್ ಡೆಸಿವಿಯರ್ ಸೇರಿದಂತೆ ಬಹುತೇಕ ಎಲ್ಲ ಸಮಸ್ಯೆಗಳು ನಿವಾರಣೆಯಾಗಿವೆ. ಸರ್ಕಾರಿ ಆಸ್ಪತ್ರೆಗಳಲ್ಲಿ ರೆಮ್ ಡೆಸಿವಿಯರ್ ಕೊರತೆಯಿಲ್ಲ. ಸರ್ಕಾರಿ ಆಸ್ಪತ್ರೆಯಿಂದ ರೆಫರ್ ಮಾಡಲಾದ ಸೋಂಕಿತರಿಗೂ ರೆಮ್ ಡೆಸಿವಿಯರ್ ಅಭಾವವಿಲ್ಲ. ಆದರೆ, ಖಾಸಗಿ ಆಸ್ಪತ್ರೆಗಳಲ್ಲಿ ಕೊಂಚ ಸಮಸ್ಯೆ ಉಂಟಾಗಿದೆ ಎಂಬ ಮಾತುಗಳು ಕೇಳಿಬಂದಿವೆ. ಅದರ ನಿವಾರಣೆಗೂ ಸಾಕಷ್ಟು ಕ್ರಮ ಕೈಗೊಳ್ಳಲಾಗಿದೆ ಎಂದರು.
ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ಜಿಪಂ ಸಿಇಒ. ಡಾ.ಕೆ ವಿದ್ಯಾಕುಮಾರಿ, ಎಸ್‌ಪಿ ಡಾ.ಕೆ. ವಂಶಿಕೃಷ್ಣ, ಅಪರ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ, ಉಪ ವಿಭಾಗಾಧಿ ಕಾರಿ ಅಜಯ್, ಡಿಎಚ್‌ಒ ಡಾ. ನಾಗೇಂದ್ರಪ್ಪ ಹಾಗೂ ಇತರರಿದ್ದರು.