Advertisement
ಬುಧವಾರ ರಾತ್ರಿ ಊಟದ ಬಳಿಕ ನಾಲ್ವರು ವಿದ್ಯಾರ್ಥಿಗಳು ಮತ್ತು ಹಾಸ್ಟೆಲ್ ಸ್ಯೆಕುರಿಟಿ ಗಾರ್ಡ್ ತೀವ್ರ ಅಸ್ವಸ್ಥಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.
ಪಲ್ಲಕ್ಕಿ(15)ಕೊನೆಯುಸಿರೆಳೆದಿದ್ದು, ಇನ್ನುಳಿದ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು ಚಿಕಿತ್ಸೆ ಮುಂದುವರಿಸಲಾಗಿದೆ. ಆಸ್ಪತ್ರೆಯ ಎದುರು ಮೃತ ವಿದ್ಯಾರ್ಥಿಗಳ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಜಿಲ್ಲಾಸ್ಪತ್ರೆಗೆ ಜಿಲ್ಲಾಧಿಕಾರಿ ಕೆ.ಪಿ.ಮೋಹನ್ ರಾಜ್ ಭೇಟಿ ನೀಡಿ ಘಟನೆಯ ಕುರಿತು ವಿವರ ಪಡೆದಿದ್ದಾರೆ. ಘಟನೆಗೆ ಕಾರಣವೇನೆಂದು ವರದಿ ಬಂದ ಬಳಿಕ ತಿಳಿಸುವುದಾಗಿ ಡಿಎಚ್‌ಓ ರಂಗಸ್ವಾಮಿ ತಿಳಿಸಿದ್ದಾರೆ.
Related Articles
Advertisement
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲು ಜಿಲ್ಲಾಡಳಿತ ಕ್ಕೆ ಸೂಚನೆ ನೀಡಿದ್ದಾರೆ. ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ಅವರು ಜಿಲ್ಲಾಸ್ಪತ್ರೆ ಭೇಟಿ ನೀಡಿ ಮೃತ ವಿದ್ಯಾರ್ಥಿಗಳ ಪೋಷಕರಿಗೆ ಸಾಂತ್ವನ ಹೇಳಿದ್ದಾರೆ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್ ಅವರು ಹಾಸ್ಟೆಲ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶಾಲೆಯ ಮಾಲಿಕ ಮಾಜಿ ಶಾಸಕ ಕಿರಣ್ ಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಊಟದಲ್ಲಿ ಏನೋ ಮಿಶ್ರಣ ಮಾಡಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ .ವಿದ್ಯಾರ್ಥಿಗಳ ಸಾವು ನನಗೆ ತೀವ್ರ ದುಃಖ ತಂದಿದೆ ಎಂದಿದ್ದಾರೆ. ಕಿರಣ್ ಕುಮಾರ್ ಪೊಲೀಸ್ ವಶಕ್ಕೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಶಾಲೆಯ ಮಾಲಿಕ ಕಿರಣ್ ಕುಮಾರ್ ಅವರನ್ನು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.