Advertisement

ತುಮಕೂರು; ದೇವೇಗೌಡರ ಸೋಲಿಗೆ ಝೀರೋ ಟ್ರಾಫಿಕ್ ಕಾರಣವಂತೆ!

09:58 AM May 28, 2019 | Nagendra Trasi |

ತುಮಕೂರು:ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಸೋಲಿಗೆ ಝೀರೋ ಟ್ರಾಫಿಕ್ ಕಾರಣ ಎಂದು ಮಾಜಿ ಶಾಸಕ ಕೆಎನ್ ರಾಜಣ್ಣ ಪರೋಕ್ಷವಾಗಿ ಡಿಸಿಎಂ ಪರಮೇಶ್ವರ್ ವಿರುದ್ಧ ವಾಗ್ದಾಳಿ ನಡೆಸಿದರು.

Advertisement

ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮೈತ್ರಿ ಅಭ್ಯರ್ಥಿ ಸೋಲಿಗೆ ಝೀರೋ ಟ್ರಾಫಿಕ್ ಕಾರಣ. ಇನ್ನೊಂದು ವಾರದಲ್ಲಿ ಝೀರೋ ಟ್ರಾಫಿಕ್ ಟನ್ನು ಝೀರೋ ಮಾಡಿ ತೋರಿಸುತ್ತೇನೆ ಎಂದರು. ಈ ಸಂದರ್ಭದಲ್ಲಿ ಯಾರು ಅವರು ಎಂದು ಪ್ರಶ್ನಿಸಿದಾಗ, ನಾನ್ಯಾಕೆ ಅದನ್ನು ಹೇಳಲಿ ಎಂದರು.

ಡಿಸಿಎಂ ಪರಮೇಶ್ವರ್ ಹೆಸರು ಹೇಳುತ್ತಿದ್ದಂತೆಯೇ, ಜಿಲ್ಲೆಗೆ ಅವರ ಕೊಡುಗೆ ಏನಿದೆ? ಜಿ.ಪರಮೇಶ್ವರ್ ನನ್ನ ಸಹಕಾರದಿಂದ ಗೆದ್ದು ಬಂದಿದ್ದ. ಆದರೆ ಜಿಲ್ಲೆಯಲ್ಲಿ ಅವರ ಕೊಡುಗೆ ಶೂನ್ಯ ಎಂದು ಆರೋಪಿಸಿದರು. ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಎಚ್.ಡಿ.ದೇವೇಗೌಡರು ಸ್ಪರ್ಧಿಸಿ ಬಿಜೆಪಿಯ ಬಸವರಾಜ್ ವಿರುದ್ಧ ಸೋಲನ್ನನುಭಿಸಿದ್ದರು.

ತುಮಕೂರು ಲೋಕಸಭಾ ಕ್ಷೇತ್ರದಿಂದ ಕಳೆದ ಬಾರಿ ಕಾಂಗ್ರೆಸ್ ನಿಂದ ಮುದ್ದಹನುಮೇಗೌಡರು ಗೆಲುವು ಸಾಧಿಸಿದ್ದರು. ಆದರೆ ಈ ಬಾರಿ ಹಾಲಿ ಸಂಸದರಿಗೆ ಟಿಕೆಟ್ ನೀಡದೆ, ದೇವೇಗೌಡರನ್ನು ಕಣಕ್ಕಿಳಿಸಲಾಗಿತ್ತು. ಟಿಕೆಟ್ ಸಿಗದ ಅಸಮಾಧಾನದಿಂದ ಮುದ್ದಹನುಮೇಗೌಡ ಹಾಗೂ ಮಾಜಿ ಶಾಸಕ ಕೆಎನ್ ರಾಜಣ್ಣ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದರು. ಕೊನೆಗೆ ಕಾಂಗ್ರೆಸ್, ಜೆಡಿಎಸ್ ನಾಯಕರ ಮನವೊಲಿಕೆ ಬಳಿಕ ಇಬ್ಬರೂ ನಾಮಪತ್ರ ವಾಪಸ್ ಪಡೆದಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next