Advertisement

ತುಮಕೂರು ಬಾಣಂತಿ- ಮಕ್ಕಳ ಸಾವಿನ ಪ್ರಕರಣ: ನಾಲ್ವರ ಅಮಾನತು, ಕ್ರಿಮಿನಲ್ ಮೊಕದ್ದಮೆಗೆ ಸೂಚನೆ

09:33 AM Nov 04, 2022 | Team Udayavani |

ಬೆಂಗಳೂರು: ತುಮಕೂರಿನಲ್ಲಿ ನಡೆದ ಬಾಣಂತಿ- ಅವಳಿ ಮಕ್ಕಳ ಸಾವಿನ ಪ್ರಕರಣ ಹಿನ್ನೆಲೆಯಲ್ಲಿ ವ್ಯಕ್ತವಾದ ಸಾರ್ವಜನಿಕ ಟೀಕೆಯಿಂದ ತಕ್ಷಣ ಎಚ್ಚೆತ್ತುಕೊಂಡಿರುವ ಆರೋಗ್ಯ ಇಲಾಖೆ ಆಸ್ಪತ್ರೆಯ ಸ್ತ್ರೀರೋಗ ಹಾಗೂ ಪ್ರಸೂತಿ ತಜ್ಞೆ ಸೇರಿದಂತೆ ನಾಲ್ವರನ್ನು ಅಮಾನತುಗೊಳಿಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ನಿರ್ಧರಿಸಿದೆ.

Advertisement

ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಆರೋಗ್ಯ ಇಲಾಖೆ ಪ್ರಸೂತಿ ತಜ್ಞೆ ಹಾಗೂ ಮೂವರು ಶುಶ್ರೂಶಕರನ್ನು ಅಮಾನತಿನಲ್ಲಿಟ್ಟು ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುತ್ತಿದೆ. ಇನ್ನು ಮುಂದೆ ಇಂಥ ಅವಘಡಕ್ಕೆ ಕಾರಣವಾಗುವ ವೈದ್ಯ ಸಿಬ್ಬಂದಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಇದನ್ನೂ ಓದಿ:‘ಇದು ಮನೆ ಮಂದಿ ನೋಡುವ ಸಿನ್ಮಾ’: ಝೈದ್‌ ಖಾನ್‌ ರ ‘ಬನಾರಸ್‌’ ಇಂದು ತೆರೆಗೆ

ಜತೆಗೆ ಎಲ್ಲ ಆಸ್ಪತ್ರೆಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆಯನ್ನು ರವಾನಿಸಲಾಗಿದ್ದು, ತುರ್ತು ಆರೋಗ್ಯ ಸೇವೆ ಸಂದರ್ಭದಲ್ಲಿ ತಾಯಿ ಕಾರ್ಡ್, ಆಧಾರ್ ಕಾರ್ಡ್ ಸೇರಿದಂತೆ ಯಾವುದೇ ದಾಖಲೆಗಳನ್ನು ಪರಿಶೀಲಿಸುತ್ತಾ ಕುಳಿತುಕೊಳ್ಳಬಾರದು. ದಾಖಲೆ ಪರಿಶೀಲನೆ ಮಾಡುವ ಅಗತ್ಯವಿಲ್ಲ. ಆರೋಗ್ಯ ಸೇವೆ ನೀಡುವಾಗ ರೋಗಿಯ ರಾಷ್ಟ್ರೀಯತೆ, ಜಾತಿ, ವರ್ಗ, ಆರ್ಥಿಕ ಪತಿಸ್ಥಿತಿ ಅವಲೋಕನ ಮುಖ್ಯವಲ್ಲ. ಇನ್ನು ಮುಂದೆ ಇಂಥ ಘಟನೆಗೆ ಕಾರಣರಾಗುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಸುತ್ತೋಲೆಯಲ್ಲಿ ಎಚ್ಚರಿಕೆ ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next