Advertisement

Tumkur: ಕೆರೆ ಹೂಳು ತೆಗೆಯಲು ರೈತರಿಂದ ಮಾಹಿತಿ ಪತ್ರ ಕಡ್ಡಾಯ

04:04 PM May 16, 2024 | Team Udayavani |

ತುಮಕೂರು: ಜಿಲ್ಲೆಯ ವಿವಿಧ ಕೆರೆಗಳ ಹೂಳು ತೆಗೆಯುವ ಹಾಗೂ ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ತಹಶೀಲ್ದಾರ್, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಭು.ಜಿ ಅಧ್ಯಕ್ಷತೆಯಲ್ಲಿ ಸಭೆ ಆಯೋಜಿಸಲಾಗಿತ್ತು.

Advertisement

ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ ಪ್ರಭು.ಜಿ, ರೈತರ ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ಕೆರೆಯ ಮೂಲ ಸ್ವರೂಪಕ್ಕೆ ಧಕ್ಕೆಯಾಗದಂತೆ ಹೂಳು ತೆಗೆಯಬೇಕು. ಪ್ರಮುಖವಾಗಿ ರೈತರು ತಮ್ಮ ಜಮೀನುಗಳಿಗೆ ಕೆರೆಯಿಂದ ಮಣ್ಣು ತೆಗೆಯುವ ಸಂದರ್ಭದಲ್ಲಿ ಪೂರ್ವಭಾವಿಯಾಗಿ ಮಾಹಿತಿ ಪತ್ರವನ್ನು ಸಂಬಂಧಿಸಿದ ಗ್ರಾಮ ಪಂಚಾಯತಿಗೆ ಸಲ್ಲಿಸಬೇಕು ಎಂದರು.

ಕೆರೆಯ ಏರಿಯ ತಳಭಾಗದಿಂದ 10 ಮೀಟರ್ ಅಂತರವನ್ನು ಕಾಯ್ದಿರಿಸಿ ನಂತರದ ಜಾಗದಲ್ಲಿ ಹೂಳು ತೆಗೆಯಲು ಅವಕಾಶ ಕಲ್ಪಿಸಲಾಗಿದೆ. ಹಾಗೂ ಕೆರೆಯ ಮೇಲ್ಮೈ ಭಾಗದ 3 ಅಡಿ ಮಾತ್ರ ಹೂಳು ತೆಗೆಯಲು ಅವಕಾಶ ನೀಡಲಾಗಿದೆ ಎಂದರು.

ಈಗಾಗಲೇ ನರೇಗಾ ಯೋಜನೆಯಡಿಯಲ್ಲಿ ಅಮೃತ ಸರೋವರ ಕಾಮಗಾರಿಗಳು ಚಾಲ್ತಿಯಲ್ಲಿದ್ದು, ಕೆರೆ ಅಭಿವೃದ್ಧಿ, ಹೂಳು ತೆಗೆಯುವುದು, ಹಸಿರೀಕರಣ, ಫೀಡರ್ ಕಾಲುವೆಗಳ ಅಭಿವೃದ್ದಿ ಮಾಡಲು ಅವಕಾಶ ನೀಡಲಾಗಿದೆ. ಈ ಮೇಲಿನ ನಿಯಮಗಳನ್ನು ಉಲ್ಲಂಘನೆ ಮಾಡಿ ಕೆರೆಗಳಿಂದ ಹೂಳು/ಮಣ್ಣು ಸಾಗಾಣೆ ಮಾಡಿ ಕಾನೂನು ಉಲ್ಲಂಘನೆ ಮಾಡಿದರೆ ಕಾನೂನು ರೀತಿಯ ಶಿಕ್ಷೆ ವಿಧಿಸಲಾಗುತ್ತದೆ ಎಂದು ಎಚ್ಚರಿಗೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವನಂದ ಕಾರಳೆ, ಎಲ್ಲಾ ತಾಲ್ಲೂಕುಗಳ ತಹಶೀಲ್ದಾರ್ ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳು ಭಾಗಿಯಾಗಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next