Advertisement

ಕ್ಷೇತ್ರಕ್ಕೆ ಲಗ್ಗೆ ಇಡಲು ಜೆಡಿಎಸ್‌ ತೀವ್ರ ಯತ್ನ

03:02 PM Apr 11, 2019 | keerthan |

ತುಮಕೂರು: ತುಮಕೂರು ವಿಧಾನಸಭಾ ಕ್ಷೇತ್ರ ರಾಜಕೀಯವಾಗಿಯೂ ತನ್ನದೇ ಆದ ಛಾಪು ಮೂಡಿಸಿದೆ. ಈ ಕ್ಷೇತ್ರದಲ್ಲಿಲಕ್ಷ್ಮೀ ನರಸಿಂಹಯ್ಯ
ಮೂರು ಬಾರಿ ಶಾಸಕರಾಗಿದ್ದು ಬಿಟ್ಟರೆ, ಸೊಗಡು ಶಿವಣ್ಣ ನಾಲ್ಕು ಬಾರಿ ಗೆಲುವು ಸಾಧಿಸಿ ಛಾಪು ಮೂಡಿಸಿದ್ದಾರೆ. ಈ ಕ್ಷೇತ್ರದಿಂದ ಮೊದಲ ಮಹಿಳಾ ಶಾಸಕಿಎನ್ನುವ ಹೆಗ್ಗಳಿಕೆಯೊಂದಿಗೆ ಸ್ವಾತಂತ್ರ ಹೋರಾಟಗಾರ್ತಿ ಜಿ.ಸಿ.ಭಾಗೀರಥಮ್ಮ ಶಾಸಕಿಯಾಗಿ ಕೀರ್ತಿ ಪಡೆದಿದ್ದಾರೆ.

Advertisement

ಈಗ ಈ ಕ್ಷೇತ್ರದಲ್ಲಿ ಬಿಜೆಪಿಯ ಜಿಲ್ಲಾಧ್ಯಕ್ಷ ಜಿ.ಬಿ. ಜ್ಯೋತಿಗಣೇಶ್‌ ಶಾಸಕರಾಗಿದ್ದಾರೆ. ತುಮಕೂರು ಲೋಕಸಭಾ ಚುನಾವಣೆಯಲ್ಲಿ ತುಮಕೂರು ಕ್ಷೇತ್ರ ಮಹತ್ವ ಪಡೆದಿದೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಪಡೆದಿದ್ದರೂ ಕಾಂಗ್ರೆಸ್‌, ಜೆಡಿಎಸ್‌ ಹೊಂದಾಣಿಕೆ ಮಾಡಿಕೊಂಡು ಮಹಾನಗರ ಪಾಲಿಕೆ ಯಲ್ಲಿ ಅಧಿಕಾರ ನಡೆಸುತ್ತಿವೆ.

ನೇರ ಹಣಾಹಣಿ: ತುಮಕೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಈಗ ಮೇಲ್ನೋಟಕ್ಕೆ ಬಿಜೆಪಿ ಮತ್ತು ಜೆಡಿಎಸ್‌, ಕಾಂಗ್ರೆಸ್‌ ಮೈತ್ರಿ ಅಭ್ಯರ್ಥಿಗಳ ನಡುವೆ ನೇರ ಹಣಾಹಣಿ ಉಂಟಾಗಿದೆ. ಕಳೆದ 2009 ಮತ್ತು 2014ರ ಲೋಕಸಭಾ ಚುನಾವಣೆ ಮತಗಳಿಕೆ ಗಮನಿಸಿದರೆ ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಜಿ.ಎಸ್‌.ಬಸವರಾಜುಗೆ ಹೆಚ್ಚಿನ ಮತಗಳು ಲಭಿಸಿವೆ.

ಅಭ್ಯರ್ಥಿಗಳು ಪಡೆದಿರುವ ಮತ: 2009ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಅಭ್ಯರ್ಥಿಯಾಗಿದ್ದ ಕೋದಂಡರಾಮಯ್ಯ 16,096, ಬಿಜೆಪಿ ಅಭ್ಯರ್ಥಿ ಜಿ.ಎಸ್‌.ಬಸವರಾಜು 40,986 ಹಾಗೂ ಜೆಡಿಎಸ್‌ ಅಭ್ಯರ್ಥಿಯಾಗಿದ್ದ ಎಸ್‌.ಪಿ.ಮುದ್ದಹನುಮೇಗೌಡ 33,590 ಮತಗಳನ್ನು ಪಡೆದಿದ್ದರು. 2014ರ ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಅಭ್ಯರ್ಥಿಗಳು ಪಡೆದಿರುವ ಮತಗಳನ್ನು ಗಮನಿಸಿದರೆ ಕಾಂಗ್ರೆಸ್‌ನ ಎಸ್‌.ಪಿ.ಮುದ್ದ ಹನುಮೇಗೌಡ 57,629, ಬಿಜೆಪಿ ಅಭ್ಯರ್ಥಿ ಜಿ.ಎಸ್‌. ಬಸವರಾಜು 63,675 ಹಾಗೂ ಜೆಡಿಎಸ್‌ನ ಎ.ಕೃಷ್ಣಪ್ಪ 19,563 ಮತಗಳನ್ನು ಪಡೆದಿದ್ದರು.

ನಿರಂತರ ಗೆಲುವು: ತುಮಕೂರು ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ನಾಲ್ಕು ಬಾರಿ ಬಿಜೆಪಿ ಅಭ್ಯರ್ಥಿಯಾಗಿದ್ದ ಮಾಜಿ ಸಚಿವ ಸೊಗಡು ಎಸ್‌.ಶಿವಣ್ಣ
ನಿರಂತರ ಗೆಲುವು ಸಾಧಿಸಿದ್ದರು. 2013ರ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಇಬ್ಟಾಗವಾಗಿ ಕೆಜೆಪಿ ಮತ್ತು ಬಿಜೆಪಿ ನಡುವೆ ಮತ ಹಂಚಿಕೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಡಾ.ಎಸ್‌.ರμàಕ್‌ ಅಹಮದ್‌ ಗೆಲುವು ಸಾಧಿಸಿದ್ದರು. ಆ ವೇಳೆ 2014ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ನಗರದಲ್ಲಿ ಕಾಂಗ್ರೆಸ್‌ ಶಾಸಕ ಇದ್ದರೂ ಬಿಜೆಪಿ ಅಭ್ಯರ್ಥಿ ಜಿ.ಎಸ್‌.ಬಸವರಾಜುಗೆ 63,675 ಮತಗಳು ಲಭಿಸಿದ್ದವು. 2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಜಿ.ಬಿ.ಜ್ಯೋತಿಗಣೇಶ್‌ ಗೆಲುವು ಸಾಧಿಸಿದ್ದಾರೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ
ಅಭ್ಯರ್ಥಿಯಾಗಿದ್ದ ಜಿ.ಬಿ.ಜ್ಯೋತಿಗಣೇಶ್‌ 60,421, ಜೆಡಿಎಸ್‌ನ ಎನ್‌.ಗೋವಿಂದರಾಜು 55,128 ಹಾಗೂ ಕಾಂಗ್ರೆಸ್‌ನ ಡಾ. ಎಸ್‌.ರàಕ್‌ ಅಹಮದ್‌ 51,219 ಮತಗಳನ್ನು ಪಡೆದಿದ್ದರು.ಈ ಬಾರಿಯ ಲೋಕಸಭಾ ಚುನಾವಣೆ ಮೂರು ಪಕ್ಷಗಳ ನಡುವೆ ಇಲ್ಲ ಜೆಡಿಎಸ್‌, ಕಾಂಗ್ರೆಸ್‌ ಮೈತ್ರಿ ಅಭ್ಯರ್ಥಿ ಮತ್ತು ಬಿಜೆಪಿ ಅಭ್ಯರ್ಥಿ ನಡುವೆ ನೇರ ಹಣಾಹಣಿ ಇದೆ. ಜೆಡಿಎಸ್‌ ಮತ್ತು ಕಾಂಗ್ರೆಸ್‌ ಪಕ್ಷಗಳ ಮತಗಳು ಒಟ್ಟಿಗೆ ಬೀಳುತ್ತವೆ ಎನ್ನುವ ಅಭಿಪ್ರಾಯವಿದೆ. ಈ ಬಾರಿ ವಿಶೇಷವಾಗಿ ಮಾಜಿ ಪ್ರಧಾನಿ ದೇವೇಗೌಡರು ಸ್ಪರ್ಧಿಸಿರುವುದು ಚುನಾವಣಾ ಕಣ ರಂಗೇರಲು ಕಾರಣವಾಗಿದೆ. ಬಿಜೆಪಿಯ ಭದ್ರ ಕೋಟೆಗೆ ದಳಪತಿಗಳು ಲಗ್ಗೆ ಇಟ್ಟಿದ್ದಾರೆ. ಈಗಿನ ವಾತಾವರಣ ನೋಡಿದರೆ ಮತದಾರರ ಮೌನವಾಗಿದ್ದಾರೆ. ಜೆಡಿಎಸ್‌, ಕಾಂಗ್ರೆಸ್‌ ಮತಗಳು ಒಟ್ಟಿಗೆ ಬಿದ್ದರೆ ಬಿಜೆಪಿ ಕೋಟೆ ನಡುಗುತ್ತದೆ. ಈ ಕ್ಷೇತ್ರದಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿರುವ ಹಿಂದುಳಿದ ಮತಗಳೇ ನಿರ್ಣಾಯಕವಾಗಲಿ¨

Advertisement
Advertisement

Udayavani is now on Telegram. Click here to join our channel and stay updated with the latest news.

Next