Advertisement

ತುಮಕೂರು ರಸ್ತೆಯಲ್ಲಿ ಭಾರೀ ಟ್ರಾಫಿಕ್‌ ಜಾಮ್‌,ಪರದಾಟ 

01:00 PM Nov 02, 2017 | Team Udayavani |

ಬೆಂಗಳೂರು:ರಾಜ್ಯ ಬಿಜೆಪಿಯ “ನವಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆಗೆ ಗುರುವಾರ ಚಾಲನೆ ದೊರಕಿದ್ದು, ಸಮಾರಂಭದಿಂದಾಗಿ ತುಮಕೂರು -ಬೆಂಗಳೂರು ಹೆದ್ದಾರಿಯಲ್ಲಿ ಭಾರೀ  ಟ್ರಾಫಿಕ್‌ ಜಾಮ್‌ ಉಂಟಾಗಿ ಸಾವಿರಾರು ವಾಹನ ಸವಾರರು ಪರದಾಡಬೇಕಾಯಿತು. 

Advertisement

ತುಮಕೂರು ರಸ್ತೆಯಲ್ಲಿರುವ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಸಮಾರಂಭ ನಡೆಯುತ್ತಿದ್ದು ವಿವಿಧ ಜಿಲ್ಲೆಗಳಿಂದ ಸಾವಿರಾರು ಬೈಕ್‌ಗಳಲ್ಲಿ ಕಾರ್ಯಕರ್ತರು ಆಗಮಿಸಿದ ಹಿನ್ನಲೆ ಭಾರೀ ಟ್ರಾಫಿಕ್‌ ಜಾಮ್‌ ಉಂಟಾಯಿತು. 

ಅಂಬುಲೆನ್ಸ್‌ಗಳು ಸಂಚಾರ ಸಾಧ್ಯವಾಗದೆ ಪರದಾಡಬೇಕಾಯಿತು.ಕಿಲೋ ಮೀಟರ್‌ಗಳಷ್ಟು ಉದ್ದಕ್ಕೆ ವಾಹನಗಳು ಸಾಲುಗಟ್ಟಿ ನಿಂತಿವೆ. 

ಶಾ ಗೂ ಟ್ರಾಫಿಕ್‌ ಬಿಸಿ 

 ಬೆಳಗ್ಗೆ 11 ಗಂಟೆಯಿಂದಕಾರ್ಯಕ್ರಮ ಆರಂಭವಾಗಿದ್ದು,ಅಮಿತ್‌ ಶಾ ಅವರು ಮಧ್ಯಾಹ್ನ 12ಕ್ಕೆಯಾತ್ರೆಗೆ ಚಾಲನೆ ನೀಡಬೇಕಿತ್ತು. ಆದರೆ ಸಮಯಕ್ಕೆ ಸರಿಯಾಗಿ ಬರಲು ಸಾಧ್ಯವಾಗದ ಕಾರಣ ಕಾರ್ಯಕ್ರಮವನ್ನು  ಬಿಜೆಪಿ ನಾಯಕರು ಆರಂಭಿಸಿದರು. 

ಅಮಿತ್‌ ಶಾ ಅವರನ್ನು ಕರೆತರಲು ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಕಾರು ಟ್ರಾಫಿಕ್‌ ಜಾಮ್‌ನಲ್ಲಿ ಸಿಲುಕಿ ಅವರೂ ವಿಮಾನ ನಿಲ್ದಾಣದಲ್ಲಿ ಕಾಯಬೇಕಾಗಿ ಬಂತು ಎಂದು ವರದಿಯಾಗಿದೆ.

Advertisement

ಶಾ ಅವರು ಎಚ್‌ಎಎಲ್‌ ವಿಮಾನ ನಿಲ್ದಾಣದಲ್ಲೇ ವಿಶ್ರಾಂತಿ ಪಡೆಯುತ್ತಿದ್ದು 2 ಗಂಟೆಯ ವೇಳೆ ಹೆಲಿಕ್ಯಾಪ್ಟರ್‌ ಮೂಲಕ ಸಮಾವೇಶ ಸ್ಥಳಕ್ಕೆ ಆಗಮಿಸಿ ಯಾತ್ರೆಗೆ ಚಾಲನೆ ನೀಡಲಿದ್ದಾರೆ ಎಂದು ವರದಿಯಾಗಿದೆ. 

Advertisement

Udayavani is now on Telegram. Click here to join our channel and stay updated with the latest news.

Next