Advertisement
ನಗರದ 2ನೇ ವಾರ್ಡ್ ನಾಗರಿಕರ ಮಾತಿದು. ಶಿರಾಗೇಟ್‌ನಿಂದ ಸತ್ಯಮಂಗಲ, ದೇವರಾಯನ ದುರ್ಗರಸ್ತೆಯಲ್ಲಿ ಕೊಳಚೆ ನೀರು ಮನೆಗಳಿಗೆ ಮತ್ತು ರಸ್ತೆಗೆ ನುಗ್ಗಿ ಪ್ರತಿನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ.ಶಿರಾಗೇಟ್‌ನಿಂದ ಸತ್ಯಮಂಗಲ, ದೇವರಾಯನ ದುರ್ಗ ರಸ್ತೆಯಲ್ಲಿರುವ ಎಚ್‌ಕೆಎಸ್ ಕಲ್ಯಾಣ ಮಂಟ ಪದ ಮುಂಭಾಗದಲ್ಲಿ ದೊಡ್ಡ ರಾಜಗಾಲುವೆ ಇದ್ದು, ಈ ರಾಜಗಾಲುವೆಯನ್ನು ಸ್ಮಾರ್ಟ್‌ಸಿಟಿ ಅಧಿಕಾರಿಗಳು ಮುಚ್ಚಿ, ಚರಂಡಿ ನೀರು ಸರಾಗವಾಗಿ ಹರಿಯಲುಯೋಜನೆ ರೂಪಿಸದೇ ಅವೈಜ್ಞಾನಿಕ ಕಾಮಗಾರಿ ನಿರ್ವಹಣೆ ಮಾಡಿದ್ದೇ ಈ ಸಂಕಷ್ಟಕ್ಕೆ ಕಾರಣ ಎಂದು ತಿಳಿದು ಬಂದಿದೆ.
Related Articles
Advertisement
ನಗರದ ಸ್ವಚ್ಛತೆಗೆ ಆದ್ಯತೆ ನೀಡಬೇಕಿರುವ ಅಧಿಕಾರಿಗಳು ಶಿರಾಗೇಟ್ ಎಚ್‌ಕೆಎಸ್ ಕಲ್ಯಾಣ ಮಂಟಪದ ಮುಂಭಾಗ ದೊಡ್ಡ ರಾಜಗಾಲುವೆ ಮುಚ್ಚಿ, ಅವೈಜ್ಞಾನಿಕ ಕಾಮಗಾರಿ ನಿರ್ವಹಣೆಮಾಡಿದ್ದರಿಂದ ಡ್ರೈನೇಜ್ ನೀರು ಮನೆಗಳಿಗೆ ನುಗ್ಗಿ, ಕಲುಷಿತ ನೀರು ಕುಡಿಯುವ ಪರಿಸ್ಥಿತಿ ಎದುರಾಗಿದೆ. ಕಳೆದ 3-4 ದಿನಗಳಿಂದ ಕಲುಷಿತ ಚರಂಡಿ ನೀರು ಮನೆಗಳಿಗೆ ಮತ್ತು ಮನೆಗಳ ಮುಂದೆ ಇರುವ ತೊಟ್ಟಿಗಳಿಗೆ ಹರಿಯುತ್ತಿದ್ದು,ರಸ್ತೆಯಲ್ಲೂ ಕಲುಷಿತ ನೀರು ಹರಿಯುತ್ತಿರುವುದರಿಂದ ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಪ್ರತಿಭಟಿಸುವ ಮುನ್ನ ಕೂಡಲೇ ಸಂಬಂಧಪಟ್ಟಅಧಿಕಾರಿಗಳು ಸಮಸ್ಯೆ ಬಗೆಹರಿಸಬೇಕು ಎಂದುವಾರ್ಡಿನ ಮುಖಂಡರಾದ ಶ್ರೀನಿವಾಸ್, ಗಣೇಶ್, ಶಿವಣ್ಣ, ರಾಜಣ್ಣ, ಚಿಕ್ಕಸಿದ್ದಯ್ಯ, ನರಸೇಗೌಡ ಮತ್ತಿತರರು ಒತ್ತಾಯಿಸಿದ್ದಾರೆ.
ಶಿರಾಗೇಟ್ ನಿಂದ ಸತ್ಯಮಂಗಲ, ದೇವರಾಯನದುರ್ಗ ರಸ್ತೆಯ ಎಚ್‌ಕೆಎಸ್ ಕಲ್ಯಾಣ ಮಂಟಪದ ಮುಂಭಾಗದ ರಾಜಗಾಲುವೆಮುಚ್ಚಬೇಕಾದರೆ ಅದಕ್ಕೆ ಪರ್ಯಾಯ ಯೋಜನೆ ರೂಪಿಸಿ ಚರಂಡಿಯಲ್ಲಿ ಹರಿಯುವ ಕೊಳಚೆ ನೀರು ಬೇರೆಡೆ ತಿರುಗಿಸಲು ಕ್ರಮ ಕೈಗೊಳ್ಳಬೇಕಿತ್ತು. ಆದರೆ, ಈ ಕಾರ್ಯ ನಡೆದಿಲ್ಲ. ಸಮಸ್ಯೆಬಗೆಹರಿಸಬೇಕಾದ ಸ್ಮಾರ್ಟ್‌ಸಿಟಿ ಅಧಿಕಾರಿಗಳು ಮನಸೋ ಇಚ್ಚೆ ಕಾಮಗಾರಿ ನಿರ್ವಹಿಸಿ ಅವರೇ ಸುಪ್ರೀಂ ಎನ್ನುವಂತೆ ವರ್ತಿಸುತ್ತಿದ್ದಾರೆ. –ಮಂಜುನಾಥ್, ಮಹಾ ನಗರಪಾಲಿಕೆ ಸದಸ್ಯರು, 2ನೇ ವಾರ್ಡ್, ಶಿರಾಗೇಟ್