Advertisement

Tumkur:ಕೌಟುಂಬಿಕ ಕಲಹಕ್ಕೆ ಬೇಸತ್ತು ಇಬ್ಬರು ಮಕ್ಕಳೊಂದಿಗೆ ತಾಯಿ ಕೆರೆಗೆ ಬಿದ್ದು ಆತ್ಮಹತ್ಯೆ

03:42 PM Sep 26, 2024 | Team Udayavani |

ತುಮಕೂರು: ಕೌಟುಂಬಿಕ ಕಲಹಕ್ಕೆ ಬೇಸತ್ತು ಇಬ್ಬರು ಮಕ್ಕಳ ಜೊತೆ ತಾಯಿಯೊಬ್ಬರು ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧುಗಿರಿ ತಾಲೂಕಿನ ಸಿದ್ದಪುರದಲ್ಲಿ ಸೆ.26ರ ಗುರುವಾರ ನಡೆದಿದೆ.

Advertisement

ಹಸೀನಾ ತಾಜ್ (35), ಅಫೀಜ್ (8), ಅಲ್ಕೀಜ್ (4), ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡವರು.

ಮಧುಗಿರಿ ಪಟ್ಟಣದಲ್ಲಿ ಗಂಡ ಹಾಗೂ ಇಬ್ಬರು ಮಕ್ಕಳ ಜೊತೆ ವಾಸವಾಗಿದ್ದ ಹಸೀನಾ ತಾಜ್ ಗುರುವಾರ ಮಧುಗಿರಿ ಬಳಿಯಿರುವ ಸಿದ್ದಪುರ ಕೆರೆಗೆ ತನ್ನ ಇಬ್ಬರು ಮಕ್ಕಳ ಜೊತೆ ಕೆರೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗಂಡನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಮಧುಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

ಘಟನೆಗೆ ಸಂಬಂಧಿಸಿದಂತೆ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next