Advertisement
ಸ್ಥಳಾಂತರಿಸಲು ಎಲ್ಲ ಸಿದ್ಧತೆ: ನಗರದ ತುಮಕೂರು ವಿವಿ ಕಾರ್ಯಾಲಯದಲ್ಲಿ ಪತ್ರಕರ್ತರೊಂದಿಗೆ ಮಾತ ನಾಡಿದ ಅವರು, ಹೊಸ ಕ್ಯಾಂಪಸ್‌ಗೆ 2022ರಲ್ಲಿ ಪ್ರವೇಶಿಸಲೇಬೇಕೆಂದು ದೃಢ ಸಂಕಲ್ಪ ಮಾಡಿ ಬಯೋ ಟೆಕ್ನಾಲಜಿ, ಎಂ.ಕಾಂ(ಐಎಸ್), ಆರ್ಗಾನಿಕ್ ಕೆಮಿಸ್ಟ್ರಿ ವಿಭಾಗವನ್ನು ಹೊಸ ಕ್ಯಾಂಪಸ್‌ಗೆ ಸ್ಥಳಾಂತರಿಸಲು ಎಲ್ಲಾ ಸಿದ್ಧತೆ ನಡೆಸಲಾಗಿದೆ. ಕ್ಯಾಂಪಸ್ ಪೂರ್ಣ ಗೊಂಡ ಮೇಲೆ ಹಂತ ಹಂತವಾಗಿ ಉಳಿದ ವಿಭಾಗಗ ಳನ್ನು ಅಲ್ಲಿಗೆ ಸ್ಥಳಾಂತರಿಸಲಾಗುವುದು ಎಂದರು.
Related Articles
Advertisement
ಶೀಘ್ರ ಅನುದಾನ ಬಿಡುಗಡೆಯಾಗುವ ನಿರೀಕ್ಷೆ ಇದೆ. 2022 ಜನವರಿ ಅಂತ್ಯಕ್ಕೆ ಮುಖ್ಯಮಂತ್ರಿಯವರೂ ಸಹ ನೂತನ ಕ್ಯಾಂಪಸ್‌ಗೆ ಭೇಟಿ ಕೊಡಲಿದ್ದಾರೆ ಎಂದರು.
ಎನ್‌ಇಪಿ ಅನುಷ್ಠಾನದಲ್ಲೂ ವಿವಿ ಮುಂಚೂಣಿ: ತುಮಕೂರು ವಿಶ್ವವಿದ್ಯಾನಿಲಯ ಸರ್ಕಾರ ಜಾರಿಗೆ ತಂದಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನ ಗೊಳಿಸುವಲ್ಲಿ ತುಮಕೂರು ವಿಶ್ವವಿದ್ಯಾ ನಿಲಯ ಮುಂಚೂಣಿಯಲ್ಲಿದೆ. ಸರ್ಕಾರ ಹಾಕಿಕೊಟ್ಟ ವೇಳಾಪಟ್ಟಿಯನುಸಾರವೇ ನೂತನ ರಾಷ್ಟ್ರೀಯ ನೀತಿಯನ್ನು ಅನುಷ್ಠಾನಗೊಳಿಸುತ್ತಿರುವ ಮೊದಲ ವಿವಿಯೆನಿಸಿದೆ. ನೂತನ ನೀತಿಯನುಸಾರ ಸಮಾಜ ವಿಜ್ಞಾನ, ಮಾನವಿಕ ವಿಜ್ಞಾನ, ವಿಜ್ಞಾನ ಹಾಗೂ ವಾಣಿಜ್ಯ ಹೀಗೆ ಎಲ್ಲ ಪ್ರಾಯೋಗಿಕ ಕಲಿಕೆಗೆ ಒತ್ತು ನೀಡಲಾಗಿದ್ದು, ತಂತ್ರಜ್ಞಾನ ಆಧಾರಿತ, ವೃತ್ತಿಗೆ ಪೂರಕ ಕಲಿಕೆಗೆ ಒತ್ತು ನೀಡಲಾಗಿದೆ. ವಿದ್ಯಾರ್ಥಿಗಳಿಗೂ ಇದು ವರದಾನವೆನಿಸಿದೆ ಎಂದು ತಿಳಿಸಿದರು.
“ತುಮಕೂರು ವಿಶ್ವವಿದ್ಯಾನಿಲಯದ ಹೊಸ ಕ್ಯಾಪಂಸ್‌ನಲ್ಲಿ ಆರ್ಗಾನಿಕ್ ಕೆಮಿಸ್ಟ್ರಿ ವಿಭಾಗವನ್ನು ಆರಂಭಿಸಲು ಎಲ್ಲ ಸಿದ್ಧತೆ ನಡೆಸಲಾಗಿದೆ. ಕ್ಯಾಂಪಸ್ ಪೂರ್ಣಗೊಂಡ ಮೇಲೆ ಹಂತ ಹಂತವಾಗಿ ಉಳಿದ ವಿಭಾಗಗಳನ್ನು ಅಲ್ಲಿಗೆ ಸ್ಥಳಾಂತರಿಸಲಾಗುವುದು. ಕ್ಯಾಂಪಸ್‌ಗೆ ಹೋಗಿ ಬರಲು ವಿದ್ಯಾರ್ಥಿ ಹಾಗೂ ಅಧ್ಯಾಪಕರಿಗೆ ತೊಂದರೆಯಾಗ ಬಾರದೆಂದು ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಮಾಡಲಾಗಿದೆ.” ● ಕರ್ನಲ್ ಪ್ರೊ. ವೈ. ಎಸ್. ಸಿದ್ದೇಗೌಡ, ತುಮಕೂರು ವಿವಿ ಕುಲಪತಿ
ವಿದ್ಯಾರ್ಥಿಗಳ ಸಂಖ್ಯೆ 3 ಸಾವಿರಕ್ಕೆ ಏರಿಕೆ: ಸಿದ್ದೇಗೌಡ
ಕಳೆದ ಮೂರು ವರ್ಷಗಳಲ್ಲಿ ವಿವಿಯನ್ನು ಶೈಕ್ಷಣಿಕವಾಗಿ ಬೆಳೆಸಲು ಹೆಚ್ಚಿನ ಒತ್ತು ಕೊಟ್ಟಿದ್ದು, 17 ಹೊಸ ಕೋರ್ಸ್ ಆರಂಭಿಸಲಾಗಿದೆ. 540 ಇದ್ದ ವಿದ್ಯಾರ್ಥಿಗಳ ಸಂಖ್ಯೆ 3 ಸಾವಿರಕ್ಕೆ ಏರಿಕೆಯಾಗಿದೆ. ಉನ್ನತ ಶಿಕ್ಷಣ ಎಲ್ಲರಿಗೂ ಸಿಗಬೇಕೆಂಬ ಸರ್ಕಾರದ ಆಶಯವನ್ನು ಈಡೇರಿಸಲು ತುಮಕೂರು ವಿವಿ ಇತರೆ ವಿವಿಗಳಿಗಿಂತ ಒಂದು ಹೆಜ್ಜೆ ಮುಂದಡಿಯಿಟ್ಟಿದೆ. ಆಡಳಿತದಲ್ಲೂ ಪಾರದರ್ಶಕತೆ ತರಲಾಗಿದ್ದು, ಜಿಇಪಿ ವ್ಯವಸ್ಥೆಯಡಿ ಮೂಲಸೌಕರ್ಯದ ವಸ್ತುಗಳನ್ನು ಸ್ಪರ್ಧಾತ್ಮಕ ದರದಲ್ಲಿ ಖರೀದಿಸಲಾಗುತ್ತಿದೆ ಎಂದು ತುಮಕೂರು ವಿವಿ ಕುಲಪತಿ ಕರ್ನಲ್ ಪ್ರೊ. ವೈ. ಎಸ್. ಸಿದ್ದೇಗೌಡ ಹೇಳಿದರು.