Advertisement

ತುಮಕೂರು-ಯಶವಂತಪುರ ಪ್ಯಾಸೆಂಜರ್ ರೈಲು ಸಂಚಾರ

03:53 PM Dec 08, 2020 | Suhan S |

ತುಮಕೂರು: ಕೋವಿಡ್ ಮಹಾಮಾರಿಯಿಂದಾಗಿ ಕಳೆದ 9 ತಿಂಗಳಿನಿಂದ ಸ್ಥಗಿತಗೊಂಡಿದ್ದ ತುಮಕೂರು-ಯಶವಂತಪುರ ಪ್ಯಾಸೆಂಜರ್‌ರೈಲು ಸಂಚಾರ ಸೋಮವಾರದಿಂದ ಆರಂಭ ಗೊಂಡಿದ್ದು ಸಂಸದ ಜಿ.ಎಸ್‌.ಬಸವರಾಜ್‌ ರೈಲು ಆರಂಭಕ್ಕೆ ಚಾಲನೆ ನೀಡಿದರು.

Advertisement

ಸೋಮವಾರ ಬೆಳಗ್ಗೆ 7.30ಕ್ಕೆ ತುಮಕೂರು-  ಯಶವಂತಪುರ ಪ್ಯಾಸೆಂಜರ್‌ ರೈಲು ಸಂಚಾರ ಆರಂಭಿಸಿದ್ದು, ಪ್ರತಿನಿತ್ಯ ಬೆಂಗಳೂರಿಗೆ ವಿವಿಧಉದ್ಯೋಗಗಳಿಗೆ ತೆರಳುವವರು ಸಂತಸದಿಂದಲೇ ಪ್ರಯಾಣ ಬೆಳೆಸಿದರು. ಕಳೆದ 9 ತಿಂಗಳ ಹಿಂದೆ ಕೋವಿಡ್ ಸೋಂಕಿ ನಿಂದ ಜನರನ್ನು ರಕ್ಷಿಸಲು ಕೇಂದ್ರ ಸರ್ಕಾರ ರೈಲು ಸಂಚಾರ ಸ್ಥಗಿತಗೊಳಿಸಿತ್ತು. ಅಂದಿನಿಂದ ಇಂದಿನ ವರೆಗೆ ಪ್ಯಾಸೆಂಜರ್‌ ರೈಲುಗಳು ಓಡಾಟ ಮಾಡುತ್ತಿರಲಿಲ್ಲ. ಕೋವಿಡ್ ಆರ್ಭಟ ದೇಶಾದ್ಯಂತ ಇಳಿ ಮುಖವಾಗಿರುವ ಹಿನ್ನೆಲೆಯಲ್ಲಿ ಎಲ್ಲ ಮುಂಜಾ ಗ್ರತಾ ಕ್ರಮಗಳನ್ನು ಕೈಗೊಂಡು ತುಮಕೂರು-ಯಶವಂತಪುರ ಪ್ಯಾಸೆಂಜರ್‌ ರೈಲು ಸಂಚಾರಕ್ಕೆ ಸಂಸದ ಜಿ.ಎಸ್‌. ಬಸವರಾಜು ಅವರು ಪ್ರಯಾಣಿಕರಿಗೆ ಮಾಸ್ಕ್ ವಿತರಿಸುವ ಮೂಲಕ ಚಾಲನೆ ನೀಡಿದರು.

ನಂತರ ಮಾತನಾಡಿದ ಸಂಸದ ಜಿ.ಎಸ್‌. ಬಸವರಾಜು, ಕಳೆದ 9 ತಿಂಗಳಿನಿಂದ ಸ್ಥಗಿತಗೊಂಡಿದ್ದ ಪ್ಯಾಸೆಂಜರ್‌ ರೈಲು ಸಂಚಾರ ಇಂದು ಆರಂಭವಾಗಿದ್ದು, ತುಮಕೂರಿನಿಂದ ಯಶವಂತಪುರಕ್ಕೆ ಪ್ರತಿನಿತ್ಯ ತೆರಳುತ್ತಿದೆ. ಸದ್ಯಕ್ಕೆ ಯಶವಂತಪುರದ ಬದಲು ಕೆಂಪೇಗೌಡ ರೈಲುನಿಲ್ದಾಣದವರೆಗೂ ಈ ರೈಲು ಸಂಚರಿಸುವಂತೆಕ್ರಮ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ರೈಲ್ವೆ ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದರು.

ಸಂಪೂರ್ಣವಾಗಿ ರೈಲು ಸಂಚಾರ ಆರಂಭ ವಾಗುವವರೆಗೂ ಮೆಜೆಸ್ಟಿಕ್‌ ವರೆಗೆ ಈ ರೈಲು ತೆರಳಲಿ. ರೈಲುಗಳ ಸಂಚಾರ ಸಂಪೂರ್ಣವಾಗಿಆರಂಭವಾದ ಬಳಿಕ ಯಶವಂತಪುರಕ್ಕೆ ಸೀಮಿತ ಗೊಳಿಸಲಿ ಎಂದು ತಿಳಿಸಿದರು.

ಪಾಲಿಕೆ ಸದಸ್ಯೆ ಗಿರಿಜಾ ಧನಿಯಾಕುಮಾರ್‌ ಮಾತನಾಡಿ, ಕಳೆದ 9 ತಿಂಗಳಿನಿಂದ ಸ್ಥಗಿತಗೊಂ ಡಿದ್ದ ಪ್ಯಾಸೆಂಜರ್‌ ರೈಲು ಸಂಚಾರವನ್ನು ಮತ್ತೆ ಆರಂಭಿಸಿರುವುದು ಸ್ವಾಗತಾರ್ಹ. ಇದರಿಂದ ಪ್ರತಿನಿತ್ಯ ಬೆಂಗಳೂರಿಗೆ ಕೆಲಸ ಕಾರ್ಯಗಳಿಗೆ ತೆರಳುವವರಿಗೆ ತುಂಬಾ ಅನುಕೂಲವಾಗಲಿದೆ ಎಂದರು. ತುಮಕೂರು-ಯಶವಂತಪುರಪ್ಯಾಸೆಂ

Advertisement

ಜರ್‌ ರೈಲಿಗೆ ಮಾತ್ರ ನಗರದ ರೈಲ್ವೆ ನಿಲ್ದಾಣದ ಕೌಂಟರ್‌ನಲ್ಲಿ ಪ್ರಯಾಣಿಕರಿಗೆ ಕಾಯ್ದಿರಿಸದಟಿಕೆಟ್‌ ವಿತರಿಸಲಾಗುತ್ತದೆ. ಉಳಿದ ಇನ್ಯಾವುದೇರೈಲುಗಳಿಗೆ ಕೌಂಟರ್‌ನಲ್ಲಿ ಟಿಕೆಟ್‌ ನೀಡಲಾಗುವುದಿಲ್ಲ. ಉಳಿದ ರೈಲುಗಳಿಗೆ ಆನ್‌ಲೈನ್‌ನಲ್ಲೇ ಟಿಕೆಟ್‌ ಬುಕ್ಕಿಂಗ್‌ ಮಾಡಿಕೊಳ್ಳ ಬಹುದಾಗಿದೆ. ಹಾಗೆಯೇ ಶಿವಮೊಗ್ಗ-ಬೆಂಗಳೂರು ಇಂಟರ್‌ ಸಿಟಿ ಎಕ್ಸ್‌ಪ್ರೆಸ್‌, ರಾಣಿಚೆನ್ನಮ್ಮ ಎಕ್ಸ್‌ಪ್ರೆಸ್‌, ಧಾರ ವಾಡ ಇಂಟರ್‌ಸಿಟಿ ಹಾಗೂ ರಾತ್ರಿ ಹೊಸಪೇಟೆ ಎಕ್ಸ್‌ಪ್ರೆಸ್‌ ರೈಲುಗಳು ಇಂದಿನಿಂದ ಸಂಚಾರ ಆರಂಭಿಸಿವೆ.ಈ ರೈಲುಗಳಿಗೆಕಾಯ್ದಿರಿಸದಟಿಕೆಟ್‌ ನೀಡಲಾಗುವುದಿಲ್ಲ. ಆನ್‌ಲೈನ್‌ನಲ್ಲೇ ಟಿಕೆಟ್‌ ಕಾಯ್ದಿರಿಸಬೇಕಾಗಿದೆ ಎಂದು ರೈಲ್ವೆ ಇಲಾಖೆ ವಾಣಿಜ್ಯ ನಿರೀಕ್ಷಕ ಧನಂಜಯ್ಯ ತಿಳಿಸಿದರು.

ಆರಂಭವಾಗಿರುವ ಪ್ಯಾಸೆಂಜರ್‌ ರೈಲಿನಲ್ಲಿ ಕೋವಿಡ್‌ ತಡೆಗಾಗಿ ಪ್ರಯಾಣಿಕರು ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು,ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಯಾವುದೇ ಕಾರಣಕ್ಕೂ ಕೋವಿಡ್‌ ಮುಂಜಾಗ್ರತೆ ಕಾಪಾಡದವರಿಗೆ ರೈಲಿ ನಲ್ಲಿ ಪ್ರಯಾಣಿಸಲು ಅವಕಾಶ ಇರುವುದಿಲ್ಲ ಎಂದು ತಿಳಿಸಿದ್ದಾರೆ. ರೈಲ್ವೆ ಇಲಾಖೆಯ ಬೆಂಗಳೂರುವಿಭಾಗದಎಡಿಆರ್‌ಎಲ್‌ಲಕ್ಷ್ಮಣ್‌ಸಿಂಗ್‌, ಎಸಿಎಂ ಇಕ್ಬಾಲ್‌ ಅಹಮದ್‌, ಸ್ಟೇಷನ್‌ ಮ್ಯಾನೇ ಜರ್‌ ರಮೇಶ್‌ಬಾಬು ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next