Advertisement

ತುಂಗಭದ್ರಾ ಡ್ಯಾಂನಿಂದ 35 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

07:59 PM Jul 12, 2022 | Team Udayavani |

ಕೊಪ್ಪಳ: ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಸುರಿಯುತ್ತಿರುವ ಅತಿಯಾದ ಮಳೆಯಿಂದಾಗಿ ಬಯಲು ಸೀಮೆಯ ತುಂಗಭದ್ರಾ ಜಲಾಶಯವು ಭರ್ತಿಯಾಗಿದ್ದು, ಮಂಗಳವಾರ ಸಂಜೆ 6 ಗಂಟೆ ವೇಳೆಗೆ ಡ್ಯಾಂನಿಂದ ನದಿಪಾತ್ರಗಳಿಗೆ 35984 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಯಿತು.

Advertisement

ಕಳೆದ ಕೆಲವು ದಿನಗಳಿಂದ ಶಿವಮೊಗ್ಗ ಸೇರಿದಂತೆ ಕರಾವಳಿ ಭಾಗದಲ್ಲಿ ಅತ್ಯಧಿಕ ಮಳೆಯು ಸುರಿಯುತ್ತಿದ್ದು ಇದರಿಂದ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಬಹುಪಾಲು ಡ್ಯಾಂಗಳು ಭರ್ತಿಯಾಗಿ ಹರಿಯುತ್ತಿವೆ. ಈಗ ತುಂಗಭದ್ರಾ ಜಲಾಶಯವು ಭರ್ತಿಯಾಗಿದೆ. ತುಂಗಭದ್ರಾ ಡ್ಯಾಂನಿನ ನೀರು ಸಂಗ್ರಹಣ ಸಾಮರ್ಥ್ಯ 133 ಟಿಎಂಸಿಯಷ್ಟಿದ್ದು, ಡ್ಯಾಂ ಒಡಲಾಳದಲ್ಲಿ 33 ಟಿಎಂಸಿಯಷ್ಟು ಹೂಳು ತುಂಬಿಕೊಂಡ ಹಿನ್ನೆಲೆಯಲ್ಲಿ ಪ್ರಸ್ತುತ ಡ್ಯಾಂ ನೀರು ಸಂಗ್ರಹ ಸಾಮರ್ಥ್ಯ 100 ಟಿಎಂಸಿಯಷ್ಟಿದೆ. ಕಳೆದ ಕೆಲವು ದಿನಗಳಿಂದ ಡ್ಯಾಂನ ಒಳ ಹರಿವು 95 ಸಾವಿರ ಕ್ಯೂಸೆಕ್‌ಗೂ ಹೆಚ್ಚಿದೆ. ನೀರಿನ ಒಳ ಹರಿವು ನೋಡಿಕೊಂಡು ನೀರಾವರಿ ಇಲಾಖೆಯ ಅಧಿಕಾರಿ ವರ್ಗವು ಡ್ಯಾಂಗೆ 35 ಸಾವಿರ ಕ್ಯೂಸೆಕ್‌ನಷ್ಟು ನೀರನ್ನು ನದಿಪಾತ್ರಗಳಿಗೆ ಹರಿ ಬಿಡಲಾಗಿದೆ.

ಗೇಟ್ ಮೂಲಕ ನೀರು ಹರಿಬಿಟ್ಟ ಹಿನ್ನೆಲೆಯಲ್ಲಿ ಸುತ್ತಲಿನ ಸಹಸ್ರಾರು ಜನರು ತುಂಗಭದ್ರಾ ಸೊಬಗನ್ನು ನೋಡಲು ಆಗಮಿಸುತ್ತಿದ್ದಾರೆ. ಇದಲ್ಲದೇ ನದಿಪಾತ್ರಕ್ಕೆ 1 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರು ಹರಿಬಿಡುವ ಸಾಧ್ಯತೆ ಇದೆ ಎನ್ನುವ ಮಾಹಿತಿಯು ತಿಳಿದು ಬಂದಿದೆ. ಹಾಗಾಗಿ ನದಿ ಪಾತ್ರದ ಗ್ರಾಮಗಳಿಗೆ ಮುಂಚಿತವೇ ಡಂಗೂರ ಸಾರಿಸಿ ನದಿ ಪಾತ್ರದ ಸ್ಥಳಕ್ಕೆ ಜನ ಜಾನುವಾರು ತೆರಳದಂತೆ ಕಟ್ಟೆಚ್ಚರ ನೀಡಲಾಗಿದೆ. ನಿಷೇಧಾಜ್ಞೆಯನ್ನೂ ಹೊರಡಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next