Advertisement
4-5 ವರ್ಷಗಳಿಂದ ಒಂದಿಲ್ಲೊಂದು ಕಾರಣಕ್ಕಾಗಿ ಅಚ್ಚುಕಟ್ಟು ಪ್ರದೇಶದ ಕೊಪ್ಪಳ, ಬಳ್ಳಾರಿ, ವಿಜಯನಗರ, ರಾಯಚೂರು ಜಿಲ್ಲೆಗಳ ರೈತರು ಪೂರ್ಣಪ್ರಮಾಣದಲ್ಲಿ ಮುಂಗಾರು, ಬೇಸಗೆ ಬೆಳೆ ಪಡೆಯುವಲ್ಲಿ ವಿಫಲರಾಗಿದ್ದಾರೆ. ಸದ್ಯ ಕ್ರಸ್ಟ್‌ಗೇಟ್ ದುರಸ್ತಿ ಮಾಡಲು ಸಂಗ್ರಹವಾಗಿರುವ ನೀರಿನ ಪೈಕಿ 60 ಟಿಂಸಿ ನೀರು ನದಿಗೆ ಹರಿಸಬೇಕಿದೆ. ಈ ಬಾರಿ ಜುಲೈ ತಿಂಗಳಲ್ಲಿ ನೀರು ಕಾಲುವೆಗೆ ಹರಿಸಿದ್ದರಿಂದ ಅಚ್ಚುಕಟ್ಟು ಪ್ರದೇಶದಲ್ಲಿ ಶೇ. 80ರಷ್ಟು ಭೂಮಿಯಲ್ಲಿ ಭತ್ತದ ನಾಟಿ ಮಾಡಲಾಗಿದೆ. ಸಪ್ಟೆಂಬರ್-ಅಕ್ಟೋಬರ್‌ನಲ್ಲಿ ಜಲಾನಯನ ಪ್ರದೇಶದಲ್ಲಿ ಮಳೆಯಾಗದಿದ್ದರೆ ಮುಂಗಾರು ಹಂಗಾಮಿನ ಭತ್ತದ ಬೆಳೆ ರೈತರ ಕೈ ಸೇರುವುದು ಅನುಮಾನವಾಗಿದೆ.
Advertisement
TungaBhadra Dam: ಅಚ್ಚುಕಟ್ಟು ರೈತರ 2ನೇ ಬೆಳೆ ಕನಸು ಭಗ್ನ
12:42 AM Aug 12, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.