ಹೊಸಪೇಟೆ: ವಿಜಯನಗರ, ಬಳ್ಳಾರಿ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳ ರೈತರ ಜೀವನಾಡಿ ತುಂಗಭದ್ರಾ ಜಲಾಶಯ ಭರ್ತಿಗೆ ಕ್ಷಣಗಣನೆ ಆರಂಭವಾಗಿದ್ದು, ಯಾವುದೇ ಕ್ಷಣದಲ್ಲಿ ಹೆಚ್ಚುವರಿ ನೀರು ನದಿಗೆ ಹರಿಸುವ ಸಾಧ್ಯತೆ ಇದೆ. ನದಿಪಾತ್ರದ ಜನರು, ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ತುಂಗಭದ್ರಾ ಮಂಡಳಿ ಸೂಚಿಸಿದೆ.
ಮಲೆನಾಡಿನಲ್ಲಿ ಎಡಬಿಡದೇ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಜಲಾಶಯಕ್ಕೆ ಹರಿದು ಬರುವ ಒಳಹರಿವು ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡಿದೆ. 1 ಲಕ್ಷ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು, ಜಲಾಶಯದ ಕ್ರಸ್ಟ್ಗಳನ್ನು ಯಾವುದೇ ಸಮಯದಲ್ಲಿ ತೆರೆದು ಹೆಚ್ಚುವರಿ ನೀರು ನದಿಗೆ ಹರಿಸಲಾಗುವುದು. ಈ ಹಿನ್ನೆಲೆಯಲ್ಲಿ ನದಿಪಾತ್ರದ ಜನ-ಜಾನುವಾರುಗಳು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ: ಕೂಡ್ಗಿ ವಿದ್ಯುತ್ ಪಂಜಾಬಿಗೆ ವಿನಿಮಯ: ಇಂಧನ ಇಲಾಖೆಯಿಂದ 500 ಕೋಟಿ ರೂ. ಉಳಿತಾಯ
ವಾರದಿಂದ ದಿನೆ, ದಿನೇ ಒಳಹರಿವನ ಪ್ರಮಾಣದಲ್ಲಿ ಏರಿಕೆಯಾಗಿದೆ. ಇದೀಗ 1 ಲಕ್ಷ ಕ್ಯೂಸೆಕ್ಸ್ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ.
ಜಿಲ್ಲೆಯ ಹೂವಿನಹಡಗಲಿ, ಹರಪನಹಳ್ಳಿ, ಹೂವಿನಹಡಗಲಿ ತಾಲ್ಲೂಕಿನ ಗ್ರಾಮಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ವಿಜಯನಗರ ಜಿಲ್ಲಾಡಳಿತ ಕೆಲ ಮುಂಜಾಗ್ರತ ಕ್ರಮಗಳನ್ನು ಕೈಗೊಂಡಿದೆ.