ರಾಂಬಾನ್: ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಮೇಕರ್ ಕೋಟೆ ಪ್ರದೇಶದ ಖೂನಿ ನಾಲಾದಲ್ಲಿ ಗುರುವಾರ ತಡರಾತ್ರಿ ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಂದು ಭಾಗ ಕುಸಿದಿದ್ದು, 9 ಕಾರ್ಮಿಕರು ಅವಶೇಷಗಳಡಿ ಸಿಲುಕಿದ್ದಾರೆ ಎಂದು ಜೆ & ಕೆ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಸುರಂಗ ಕುಸಿತದ ಸ್ಥಳದಲ್ಲಿ ಇನ್ನೂ 9 ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದು, ಮೃತದೇಹವನ್ನು ಹೊರತೆಗೆಯಲಾಗಿದ್ದು. ನಿನ್ನೆ 3 ಗಾಯಾಳುಗಳನ್ನು ಸ್ಥಳಾಂತರಿಸಲಾಗಿದೆ. ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಕ್ಯೂಆರ್‌ಟಿ ಮತ್ತು ಸೇನೆಯನ್ನು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ಸ್ಥಳದಲ್ಲಿ ನಿಯೋಜಿಸಲಾಗಿದೆ ಎಂದು ರಾಂಬನ್ ಡಿಸಿ ಹೇಳಿದ್ದಾರೆ.
ಇದನ್ನೂ ಓದಿ : ಬಿಬಿಎಂಪಿ ಚುನಾವಣೆ : ನಾವು ಸಿದ್ದರಿದ್ದೇವೆ ಎಂದ ಸಿಎಂ ಬೊಮ್ಮಾಯಿ