Advertisement

ತೊಗರಿಗೆ ಬೆಂಬಲ ಬೆಲೆ: ತೀರ್ಮಾನ ಮುಂದಕ್ಕೆ

07:05 AM Dec 19, 2017 | Team Udayavani |

ಬೆಂಗಳೂರು: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಮ್ಮುಖದಲ್ಲಿ ತೊಗರಿಗೆ ಬೆಂಬಲ ಬೆಲೆ ನಿಗದಿಪಡಿಸಲು ಸಚಿವ ಸಂಪುಟದ ಉಪಸಮಿತಿ ತೀರ್ಮಾನಿಸಿದೆ.

Advertisement

ವಿಧಾನಸೌಧದಲ್ಲಿ ಸೋಮವಾರ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟದ ಉಪಸಮಿತಿ ತೊಗರಿಗೆ ಬೆಂಬಲ ಬೆಲೆ ನಿಗದಿಪಡಿಸುವ ಸಂಬಂಧ ಯಾವುದೇ ತೀರ್ಮಾನ ಕೈಗೊಳ್ಳದಿರಲು ನಿರ್ಧರಿಸಿತು ಎನ್ನಲಾಗಿದೆ.

ಕೇಂದ್ರ ಸರ್ಕಾರ ಪ್ರತಿ ಕ್ವಿಂಟಾಲ್‌ಗೆ 5,450 ರೂ. ಬೆಲೆ ನಿಗದಿಪಡಿಸಿ ಗರಿಷ್ಠ 16.5 ಲಕ್ಷ ಕ್ವಿಂಟಾಲ್‌ ಖರೀದಿಸುವಂತೆ ಮಿತಿ ಹಾಕಿದೆ. ಆದರೆ ರಾಜ್ಯದಲ್ಲಿ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಇಳುವರಿ ಬಂದಿರುವುದರಿಂದ ಕೇಂದ್ರ ಸರ್ಕಾರ ಹಾಕಿರುವ ಮಿತಿಯಲ್ಲಿ ತೊಗರಿ ಖರೀದಿ ಮಾಡುವುದು ಕಷ್ಟವಾಗಲಿದೆ.

ಅಲ್ಲದೇ ಇದೊಂದು ಹೆಚ್ಚುವರಿ ಆರ್ಥಿಕ ಹೊರೆ ಬೀಳುವ ವಿಷಯವಾಗಿದ್ದರಿಂದ ಉಪಸಮಿತಿಯಲ್ಲಿ ತೀರ್ಮಾನ ತೆಗೆದುಕೊಳ್ಳುವ ಬದಲು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಕ್ಕೆ ಬರೋಣ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next