Advertisement

ವಿಜಯಪುರ ವಿ.ನಿಲ್ದಾಣ ಕಾರ್ಯಾಚರಣೆಗೆ ಮುಂದಾದ ಟರ್ಬೋ ಏರ್‌ಲೈನ್ ಕಂಪನಿ: ಗೋವಿಂದ ಕಾರಜೋಳ

05:46 PM Jul 17, 2021 | Team Udayavani |

ಬೆಂಗಳೂರು: ವಿಜಯಪುರ ವಿಮಾನ ನಿಲ್ದಾಣ ಕಾರ್ಯಾಚರಣೆ ನಡೆಸಲು ಮೆ.ಟರ್ಬೋ ಏರ್ ಲೈನ್ ಕಂಪನಿಯವರು ಮುಂದೆ ಬಂದಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ.

Advertisement

ವಿಜಯಪುರ ವಿಮಾನ ನಿಲ್ದಾಣದಿಂದ  ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರತಿದಿನ ಎಟಿಆರ್ 72 ವಿಮಾನವನ್ನು ಹಾರಾಟ ನಡೆಸಲು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಳ್ಳಲು ಆಸಕ್ತಿ ಹೊಂದಿವೆ. ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಯು ತ್ವರಿತಗತಿಯಿಂದ ನಡೆಯುತ್ತಿದ್ದು, ಈ ಕಾಮಗಾರಿಯನ್ನು 2022ರ ಮಾರ್ಚ್ ಗೆ ಪೂರ್ಣಗೊಳಿಸುವ ಗುರಿಯನ್ನು ಹೊಂದಿದೆ. ಈಗಾಗಲೇ ಕಾಮಗಾರಿಯು ತ್ವರಿತಗತಿಯಲ್ಲಿ ನಡೆಯುತ್ತಿದೆ. ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ನಿರಂತರವಾಗಿ ಭೇಟಿ ನೀಡಿ, ಕಾಮಗಾರಿಯನ್ನು ಪರಿಶೀಲನೆ ನಡೆಸಿ,  ಈ ವಿಮಾನ ನಿಲ್ದಾಣದ ಕಾಮಗಾರಿಯ ಗುಣಮಟ್ಟ ಕಾಯ್ದುಕೊಂಡು  ಹಾಗೂ ಶೀಘ್ರವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗುತ್ತಿದೆ.  ಉತ್ತರ ಕರ್ನಾಟಕದ ಅದರಲ್ಲೂ ವಿಜಯಪುರ- ಬಾಗಲಕೋಟೆ ಅವಳಿ ಜಿಲ್ಲೆಗಳ ಜನತೆಗೆ ವಿಮಾನ ಯಾನ ಕೈಗೊಳ್ಳಲು ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಸಿದ್ದರಾಮಯ್ಯಗೆ ಹೈಕಮಾಂಡ್ ಕರೆ: ಸೋಮವಾರ ದೆಹಲಿಗೆ ತೆರಳಲಿರುವ ವಿಪಕ್ಷ ನಾಯಕ

ಸಂಸದ ರಮೇಶ್ ಜಿಗಜಿಣಗಿ ಹಾಗೂ ಅವಳಿ ಜಿಲ್ಲೆಗಳ ಜನಪ್ರತಿನಿಧಿಗಳ ಒತ್ತಾಸೆಯಂತೆ ವಿಜಯಪುರ ಬಾಗಲಕೋಟೆ ಅವಳಿ ಜಿಲ್ಲೆಗಳು, ಸೊಲ್ಲಾಪುರ ಜಿಲ್ಲೆಯ ಬಹುದಿನಗಳ ಕನಸಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೊರೊನಾ ಸಂಕಷ್ಟದ ಸಂದರ್ಭದಲ್ಲೂ ಅನುದಾನ ನೀಡಿ, ಯೋಜನೆಯ ಯಶಸ್ವಿಗೆ ಕಾರಣವಾಗಿದ್ದಾರೆ. ಸ್ಥಳೀಯ, ದೇಶ ವಿದೇಶಗಳ ಪ್ರವಾಸಿಗರು, ನಾಗರೀಕರು ಸುಲಲಿತವಾಗಿ ವಿಮಾನಯಾನ ನಡೆಸಿ, ಈ ಐತಿಹಾಸಿಕ, ಪಾರಂಪರಿಕ, ಪ್ರವಾಸೋದ್ಯಮ ತಾಣಗಳಿಗೆ ಪ್ರವಾಸ ಕೈಗೊಳ್ಳಲು ಅನುಕೂಲವಾಗಲಿದೆ ಎಂದು ಡಿಸಿಎಂ ತಿಳಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next