Advertisement

ವಸತಿ ಶಾಲೆಗಳನ್ನು ಕ್ವಾರಂಟೈನ್ ಕೇಂದ್ರಗಳನ್ನಾಗಿ ಉಪಯೋಗಿಸಿ: ಡಿಸಿಎಂ ಕಾರಜೋಳ ಸೂಚನೆ

09:43 AM Mar 28, 2020 | keerthan |

ಬೆಂಗಳೂರು: ಕೋವಿಡ್-19 ನಿಯಂತ್ರಣಕ್ಕಾಗಿ ರಾಜ್ಯದ ವಸತಿ ಶಾಲೆಗಳನ್ನು ಕ್ವಾರಂಟೈನ್ ಕೇಂದ್ರಗಳನ್ನಾಗಿ ಬಳಸಿ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ.

Advertisement

ಈ ಬಗ್ಗೆ ಪ್ರಕಟಣೆ ನೀಡಿರುವ ಡಿಸಿಎಂ ಕಾರಜೋಳ, ವಸತಿ ಶಾಲೆಗಳಿಗೆ ರಜೆ ನೀಡಿರುವ ಕಾರಣ ವಸತಿ ಶಾಲೆಗಳಲ್ಲಿ ಯಾವುದೇ ವಿದ್ಯಾರ್ಥಿಗಳಿಲ್ಲ. ರಾಜ್ಯದ ಎಲ್ಲಾ ಜಿಲ್ಲಾ, ತಾಲೂಕುಗಳಲ್ಲಿರುವ ವಸತಿ ಶಾಲೆಗಳು ಮತ್ತು ವಿದ್ಯಾರ್ಥಿ ನಿಲಯಗಳು ಸುಸಜ್ಜಿತವಾಗಿದ್ದು, ಪ್ರತ್ಯೇಕ ಕೊಠಡಿಗಳು, ಅಡುಗೆ ಮನೆ, ಶೌಚಾಲಯ ಸೇರಿದಂತೆ ಎಲ್ಲಾ ಸೌಕರ್ಯಗಳನ್ನು ಹೊಂದಿದೆ ಎಂದಿದ್ದಾರೆ.

ಈ ವಸತಿ ಶಾಲೆಗಳು ಜನವಸತಿ ಪ್ರದೇಶಗಳಿಂದ ದೂರವಿದೆ. ಅಗತ್ಯವಿದ್ದರೆ ಹೆಚ್ಚಿನ ಖರ್ಚಿಲ್ಲದೇ ಕ್ವಾರಂಟೈನ್ ಕೇಂದ್ರಗಳನ್ನಾಗಿ ಪರಿವರ್ತಿಸಬಹುದಾಗಿದೆ. ಜಿಲ್ಲಾಡಳಿತ ವಸತಿ ಶಾಲೆಗಳನ್ನು ಮುಕ್ತವಾಗಿ ಬಹಳಸಬಹುದು ಎಂದು ಡಿಸಿಎಂ ಗೋವಿಂದ ಕಾರಜೋಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next