ಬೆಂಗಳೂರು: ರಾಜ್ಯ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಟ್ವೀಟ್ ವಾರ್ ಮತ್ತೆ ಮುಂದುವರಿದಿದೆ. ‘ಬ್ಲಾಕ್ಮೇಲ್ ಸಂಪುಟ’ ಎಂದು ಕಾಂಗ್ರೆಸ್ ಟೀಕಿಸಿದರೆ, ಪಕ್ಷ ತೊರೆದವರ ವಿರುದ್ಧ ಕಾಂಗ್ರೆಸ್ ಹಗೆತನ ಸಾಧಿಸುತ್ತಿದೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಕಾಮಿಡಿ ಕಿಂಗ್ ನಳಿನ್ ಕುಮಾರ್ ಕಟೀಲ್ ಅವರೇ ವಿಧಾನಸೌಧದ ಸನಿಹದಲ್ಲಿಯೇ ಒಬ್ಬ ಶಾಸಕರಿಗೇ ರಕ್ಷಣೆ ನೀಡಲಾಗದ್ದು ನಿಮ್ಮ ಸರ್ಕಾರದ ವೈಫಲ್ಯವಲ್ಲವೇ? ಉದ್ಯೋಗ ಕೇಳಿದ ಯುವತಿಯನ್ನು ದುರುಪಯೋಗಪಡಿಸಿಕೊಂಡ ನಿಮ್ಮಿಂದ ಇಡೀ ರಾಜ್ಯಕ್ಕೆ ಕೆಟ್ಟ ಹೆಸರು. ರಕ್ಷಣೆ ಕೇಳಿದ ಆ ಯುವತಿಗಾದರೂ ರಕ್ಷಣೆ ಒದಗಿಸುವಿರಾ ಅಥವಾ ನಿಮ್ಮ ಮಹಿಳಾ ವಿರೋಧಿ ನಡೆ ಮುಂದುವರೆಸುವಿರಾ ಎಂದು ಕಾಂಗ್ರೆಸ್ ಟ್ವೀಟ್ ಮಾಡಿತ್ತು.
ಇದನ್ನೂ ಓದಿ:ತೆಂಗಿನಕಾಯಿ ಕೀಳಲುಹೋದ ಯುವಕ ನಿಯಂತ್ರಣ ತಪ್ಪಿ ಮರದಿಂದ ಬಿದ್ದು ಸಾವು!
ಇದಕ್ಕೆ ತಿರುಗೇಟು ನೀಡಿದ ಬಿಜೆಪಿ, ಆ ಘಟನೆಯ ಹಿಂದೆ ಒಬ್ಬ ಜೈಲಿನಿಂದ ಜಾಮೀನಿನ ಮೇಲೆ ಹೊರಗಡೆ ಬಂದಿರುವ ಭ್ರಷ್ಟಾಚಾರಿ ಆರೋಪಿ ಮಹಾ ನಾಯಕನ ಕೈವಾಡ ಇದೆ ಎಂಬ ಸುದ್ದಿ ಇದೆ. ಆ ಮಹಾನಾಯಕ ಕೂಡಾ ತನ್ನನ್ನು ಸಿಲುಕಿಸುವ ಕುತಂತ್ರ ನಡೆಯುತ್ತಿದೆ ಎಂದು ಹೇಳುವ ಮೂಲಕ ಹೆಗಲು ಮುಟ್ಟಿ ನೋಡಿಕೊಂಡಿದ್ದಾರೆ. ರಾಹುಲ್ ಗಾಂಧಿ ಏಕೆ ಸುಕನ್ಯಾ ದೇವಿಯ ಪರವಾಗಿ ಒಮ್ಮೆಯೂ ಧ್ವನಿ ಎತ್ತಿಲ್ಲ ಎಂದು ಟ್ವೀಟ್ ಮಾಡಿದೆ.
ನಿಮ್ಮ ಶ್ರೀನಿವಾಸ್ ಪ್ರಸಾದ್ ಹೇಳಿದಂತೆ ವಾಮಮಾರ್ಗದ ಸರ್ಕಾರ. ನಿಮ್ಮವರೇ ಹೇಳಿದಂತೆ ಬ್ಲಾಕ್ಮೇಲ್ ಸಂಪುಟ. ಹನಿಟ್ರಾಪ್ ಮೂಲಕ ಆಪರೇಷನ್ ಕಮಲ. ಯತ್ನಾಳ್ ಹೇಳಿದಂತೆ ಯಡಿಯೂರಪ್ಪ ಫ್ಯಾಮಿಲಿ ಸರ್ಕಾರ. ‘ದಂಡ’ದ ಸರ್ಕಾರಕ್ಕೆ ‘ಮಾನ’ ಎಲ್ಲಿದೆ? ತಾಕತ್ತಿದ್ದರೆ ಆಪರೇಷನ್ ಕಮಲದ ಸರ್ಕಾರವನ್ನು ವಿಸರ್ಜಿಸಿ ಚುನಾವಣೆಗೆ ಬನ್ನಿ ಎಂದು ಬಿಜೆಪಿಗೆ ಕಾಂಗ್ರೆಸ್ ಸವಾಲೆಸಿದಿದೆ.
ಇದನ್ನೂ ಓದಿ: ಕಾಳೇನಹಳ್ಳಿಯ ರೇವಣಸಿದ್ಧ ಮಹಾಸ್ವಾಮೀಜಿ ನಿಧನ: ಸಿಎಂ ಬಿಎಸ್ ವೈ ಸಂತಾಪ
ಇದಕ್ಕೆ ತಿರುಗೇಟು ನೀಡಿದ ಬಿಜೆಪಿ, ನನ್ನನ್ನು ಸಿಲುಕಿಸುವ ಕುತಂತ್ರ ನಡೆಯುತ್ತಿದೆ ಎಂದು ಮಹಾನಾಯಕರೊಬ್ಬರು ಹೇಳಿದ್ದಾರೆ. ಈ ಪ್ರಕರಣದಲ್ಲಿ ನನ್ನ ಹೆಸರು ಯಾಕೆ ಬರುತ್ತಿದೆ, ಗೊತ್ತಾಗುತ್ತಿಲ್ಲ ಎಂದು ಮಹಾನಾಯಕಿಯೊಬ್ಬರು ಹೇಳಿದ್ದಾರೆ. ಏನಿದೆಲ್ಲಾ!? ಬೆಂಕಿಯಿಲ್ಲದೆ ಹೊಗೆಯಾಡುವುದೇ? ಪಕ್ಷ ತೊರೆದವರ ವಿರುದ್ಧ ಕಾಂಗ್ರೆಸ್ ಹಗೆತನ ಸಾಧಿಸುತ್ತಿದೆ ಎಂದು ಆರೋಪಿಸಿದೆ.