Advertisement
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ವಿಧಾನಸಭೆಯಲ್ಲೇ ಎಲ್ಲವನ್ನೂ ದಾಖಲೆ ಸಮೇತ ಇಟ್ಟಿದ್ದೇನೆ. ಆ ದಾಖಲೆಗಳೇ ಎಲ್ಲವನ್ನೂ ಮಾತನಾಡುತ್ತಿವೆ. ನನ್ನ ಹೊಡೆದ ಗುಂಡು ಎಲ್ಲಿ ವಿಫಲವಾಗಿದೆ? ಅದನ್ನು ವಿಫಲಗೊಳಿಸುವ ಇನ್ನೊಂದು ಹುನ್ನಾರ, ಷಡ್ಯಂತ್ರ ಈಗ ನಡೆದಿದೆ ಅಷ್ಟೇ ಎಂದು ಆರೋಪಿಸಿದ್ದಾರೆ.
Related Articles
Advertisement
ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಎಂದರೆ ಸರಕಾರಿ ಸ್ವತ್ತುಗಳನ್ನು ಭೂರಕ್ಕಸರ ಬಾಯಿಗೆ ಹಾಕುವುದಾ? ಮುಜರಾಯಿ ಇಲಾಖೆಯ ಶ್ರೀ ದೊಡ್ಡ ಬಸವಣ್ಣ, ಕಾರಂಜಿ ಶ್ರೀ ಆಂಜನೇಯ ಸ್ವಾಮಿ ದೇಗುಲಗಳಿಗೆ ಸೇರಿದ ಕೋಟ್ಯಂತರ ರೂ. ಬೆಲೆಯ ಆಸ್ತಿಯನ್ನು ನುಂಗಲು ಹೊರಟ ನುಂಗಣ್ಣರಿಗೆ ದಾರಿ ಸಲೀಸು ಮಾಡಿ ಕೊಡುವುದಾ? ಇದ್ಯಾವ ಶಿಕ್ಷಣ ನೀತಿ? ಇದ್ಯಾವ ಧರ್ಮನೀತಿ? ನಮ್ಮ ಅವಧಿಯಲ್ಲಿ ಶೈಕ್ಷಣಿಕ ಸುಧಾರಣೆಗಾಗಿ ಬಹಳ ಕ್ರಮ ಕೈಗೊಂಡಿದ್ದೇವೆ ಎನ್ನುತ್ತೀರಿ. ಸುಧಾರಣೆ ಎಂದರೆ, ಸಾರ್ವಜನಿಕ ಟ್ರಸ್ಟುಗಳನ್ನು ಹೀಗೆ ನುಂಗಿ ನೀರು ಕುಡಿಯಲು ಒಳಗೊಳಗೇ ಸಹಕಾರ ನೀಡುವುದಾ? ಪ್ರಧಾನಿ ಮೋದಿ ಅವರು ಹೇಳಿಕೊಟ್ಟ ವಿಶ್ವಗುರು ಪರಿಕಲ್ಪನೆ ಇದೇನಾ? ಶೈಕ್ಷಣಿಕೋದ್ಧಾರ ಮಾಡುವುದು ಎಂದರೆ ಹೀಗೆನಾ ಎಂದು ಎಚ್ ಡಿಕೆ ಖಾರವಾಗಿ ಪ್ರಶ್ನಿಸಿದ್ದಾರೆ.
2018ರಲ್ಲಿ ನನ್ನ ನೇತೃತ್ವದ ಸರಕಾರವು ದಾನಿ ಟ್ರಸ್ಟಿ, ಅಜೀವ ಟ್ರಸ್ಟಿ ನೇಮಕದ ಬಗ್ಗೆ ಬಿಎಂಎಸ್ಟ್ರಸ್ಟಿನಲ್ಲಿ ಕೈಗೊಂಡಿದ್ದ ತಿದ್ದುಪಡಿಗಳು ಅಕ್ರಮ ಎಂದು ಸಾರಿ, ಆ ತಿದ್ದುಪಡಿಗಳನ್ನು ಸಾರಾಸಗಟಾಗಿ ತಿರಸ್ಕರಿತ್ತು. ನನ್ನ ಸರಕಾರ ಹೋದ ಮೇಲೆ ಬಂದ ಬಿಜೆಪಿ ಸರಕಾರ ಈ ಅಕ್ರಮ ತಿದ್ದುಪಡಿಗಳನ್ನು ಶರವೇಗದಲ್ಲಿ ಪುರಸ್ಕರಿಸಿದ್ದು ಹೇಗೆ? ಟ್ರಸ್ಟಿನಲ್ಲಿ ಸರಕಾರದ ಟ್ರಸ್ಟಿಗೇ ಕೊಕ್ ಕೊಟ್ಟು, ಈ ಟ್ರಸ್ಟಿನಲ್ಲಾಗುತ್ತಿದ್ದ ಗೋಲ್ʼಮಾಲ್ ಬಗ್ಗೆ ಸರಕಾರಿ ಟ್ರಸ್ಟಿಯಾಗಿದ್ದ ಐಎಎಸ್ ಅಧಿಕಾರಿ ಡಾ.ಮಂಜುಳಾ ಮತ್ತು ಇನ್ನೊರ್ವ ಐಎಎಸ್ ಅಧಿಕಾರಿ ಮದನ್ ಗೋಪಾಲ್ ಅವರು ಬರೆದ ಪತ್ರಗಳನ್ನು ಕಸದಬುಟ್ಟಿಗೆ ಹಾಕಿದ್ದು ಏಕೆ? ಇದರ ಹಿಂದಿನ ಹುನ್ನಾರ ಏನು ಉನ್ನತ ಶಿಕ್ಷಣ ಸಚಿವರೇ? ಟ್ರಸ್ಟಿನಲ್ಲಿ ಕೈಗೊಂಡ ಅಕ್ರಮ ತಿದ್ದುಪಡಿಗಳನ್ನು ಸಕ್ರಮಗೊಳಿಸಲು ತಾವು ತೋರಿದ ಆತುರ, ಕಾಳಜಿ ಎಂಥದ್ದು ಎಂಬುದು ನನಗೆ ಗೊತ್ತು. ಅವುಗಳ ಅನುಮೋದನೆಗಾಗಿ ತಾವೇ ಬರೆದ ಟಿಪ್ಪಣಿಯ ಒಕ್ಕಣಿಯನ್ನು ಒಮ್ಮೆ ಓದಿಕೊಳ್ಳಿ ಅಶ್ವತ್ಥನಾರಾಯಣ ಅವರೇ. ಉನ್ನತ ಶಿಕ್ಷಣ ಸಚಿವರಾದ ನಿಮ್ಮ ಉನ್ನತ ಮಟ್ಟ ಎಷ್ಟು ಕೆಳಮಟ್ಟದಲ್ಲಿದೆ ಎಂಬುದು ಅರ್ಥವಾಗುತ್ತದೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.