Advertisement
ಗರ್ಭಿಣಿ ಮಹಿಳೆ ಉಡುಪಿ ಲಾಡ್ಜ್ ನಲ್ಲಿ 15 ದಿನಗಳ ಕ್ವಾರಂಟೈನ್ ಅವಧಿ ಪೂರೈಸಿದ್ದಾರೆ. ಆದರೂ ಇನ್ನೂ ಕ್ವಾರಂಟೈನ್ ಸೆಂಟರ್‌ನಲ್ಲಿ ಇಡಲಾಗಿದೆ. ಜಿಲ್ಲಾಡಳಿತ ಸರಕಾರದ ನಿಯಮ ಪಾಲಿಸುತ್ತಿಲ್ಲ. ಮನೆಯಿಂದ ಆಹಾರ ಕಲ್ಪಿಸುವ ವ್ಯವಸ್ಥೆಯನ್ನು ಸಹ ನಿಷೇಧಿಸಿದೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.
ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಟ್ವೀಟ್‌ಗೆ ಪ್ರತ್ಯುತ್ತರ ನೀಡಿದ ಉಡುಪಿ ಜಿಲ್ಲಾಧಿಕಾರಿ ಅವರು, ಇಲ್ಲಿ ಬೇಜವಾಬ್ದಾರಿ ಪ್ರಶ್ನೆಯೇ ಇಲ್ಲ. ಜಿಲ್ಲೆಗೆ 8 ಸಾವಿರ ಜನರು ಹೊರ ದೇಶ, ರಾಜ್ಯದಿಂದ ಬಂದಿದ್ದಾರೆ. ಅವರೆಲ್ಲರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕಾಗಿದೆ. ದುಬಾೖಯಿಂದ ಬಂದ ಗರ್ಭಿಣಿ ಮಹಿಳೆಯು ಕೋವಿಡ್ ವೈರಸ್ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕ ಹೊಂದಿರುವ ಕಾರಣದಿಂದ 14 ದಿನಗಳ ಅನಂತರ ಪರೀಕ್ಷಿಸಿ ಬಿಡುಗಡೆ ಮಾಡಲಾಗುತ್ತದೆ ಎಂದು ರೀಟ್ವೀಟ್ ಮಾಡಿದ್ದಾರೆ. ಗರ್ಭಿಣಿ ಮಹಿಳೆ ಮನೆಗೆ
15 ದಿನ ಕ್ವಾರಂಟೈನ್ ಅವಧಿ ಮುಗಿಸಿದ ಗರ್ಭಿಣಿಯನ್ನು ಹೊಟೇಲ್‌ನಿಂದ ಬಿಡುಗಡೆ ಮಾಡಿ ಮನೆಗೆ ಕಳುಹಿಸಲಾಗಿದೆ. ನಾನು ಜಿಲ್ಲಾಡಳಿತದ ವಿರುದ್ಧವಾಗಿಲ್ಲ. ಆದರೆ ನಿಯಮ ಮೀರಿ ಅಕ್ರಮ ಗಣಿಗಾರಿಕೆ, ಜನರಿಗೆ ಕಿರುಕುಳ ನೀಡಿದಾಗ ಧ್ವನಿ ಎತ್ತಬೇಕಾಗುತ್ತದೆ. ಉತ್ತಮ ಕೆಲಸಗಳಿಗೆ ನನ್ನ ಬೆಂಬಲವಿರುತ್ತದೆ ಎಂದು ಪ್ರಮೋದ್ ಮಧ್ವರಾಜ್ ಅವರು ಟ್ವೀಟರ್ ಖಾತೆಯಲ್ಲಿ ಮಾಹಿತಿ ನೀಡಿದ್ದಾರೆ.
Related Articles
ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಟ್ವೀಟ್‌ಗೆ ರೀ ಟ್ವೀಟ್ ಮಾಡಿದ ಶಾಸಕ ಕೆ.ರಘುಪತಿ ಭಟ್ 60 ದಿನಗಳಿಂದ ಹೋಂ ಕ್ವಾರಂಟೈನ್ ಆಗಿರುವ ಮಾಜಿ ಸಚಿವರು ಜಿಲ್ಲಾಧಿಕಾರಿ ವಿರುದ್ಧ ದೂರು ನೀಡಿದ್ದಾರೆ ಆದರೆ ಜಿಲ್ಲೆಯ ಜನರ ಆರೋಗ್ಯದ ಕಡೆಗೆ ನಿರಂತರವಾಗಿ ದುಡಿಯುತ್ತಿರುವ ಜಿಲ್ಲಾಧಿಕಾರಿ ನೇತೃತ್ವದ ತಂಡ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದ್ದಾರೆ.
Advertisement