ಬೆಂಗಳೂರು: ಜಾಮೀನಿನಲ್ಲಿ ಬಿಡುಗಡೆಯಾದ ವಾರದ ಒಳಗೆ ಮುರುಘಾ ಮಠದ ಡಾ.ಶ್ರೀ ಶಿವಮೂರ್ತಿ ಮುರುಘಾ ಶರಣರನ್ನು ಸೋಮವಾರ(ನ.20) ಪೊಲೀಸರು ಮತ್ತೆ ಬಂಧಿಸಿದ ಬೆನ್ನಲ್ಲೇ ಜಾಮೀನು ರಹಿತ ಬಂಧನದ ವಾರಂಟ್‌ಗೆ ಹೈಕೋರ್ಟ್ ತಡೆ ನೀಡಿದೆ.
ಹೈಕೋರ್ಟ್ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಪೀಠ ಜಿಲ್ಲಾ ನ್ಯಾಯಾಲಯದ ಆದೇಶ ನೀಡಿರುವುದು ಆರೋಪಿಯಾಗಿರುವ ಮುರುಘಾಶ್ರೀಗಳಿಗೆ ಗೆ ಅನ್ಯಾಯವಾಗಿದ್ದು, ಜಾಮೀನು ರಹಿತ ಬಂಧನದ ವಾರೆಂಟ್ಗೆ ತಡೆ ನೀಡಿ, ಆದೇಶ ಉಲ್ಲಂಘಿಸಿ ಚಿತ್ರದುರ್ಗಕ್ಕೆ ಕರೆತಂದಿರುವುದು ತಪ್ಪಾಗಿದೆ. ಕೂಡಲೇ ಶ್ರೀಗಳನ್ನು ಬಿಡುಗಡೆಗೊಳಿಸುವಂತೆ ಚಿತ್ರದುರ್ಗ ಜಿಲ್ಲಾ ಕಾರಾಗೃಹಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ದಾವಣಗೆರೆಯ ದೊಡ್ಡಪೇಟೆಯಲ್ಲಿನ ವಿರಕ್ತ ಮತದಲ್ಲಿದ್ದ ಶರಣರನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿ ಜೀಪ್ ನಲ್ಲಿ ಚಿತ್ರದುರ್ಗ ದತ್ತ ಕರೆದೊಯ್ದಿದ್ದರು.
ಎರಡನೇ ಪೋಕ್ಸೋ ಪ್ರಕರಣಕ್ಕೆ ಜಿಲ್ಲಾ ನ್ಯಾಯಾಲಯ ಜಾಮೀನು ರಹಿತ ಬಂಧನಕ್ಕೆ ಆದೇಶಿಸಿತ್ತು. ಆ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿದ್ದರು. ಮುರುಘಾ ಶರಣರಿಗೆ ಡಿಸೆಂಬರ್ 2ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಜಿಲ್ಲಾ ನ್ಯಾಯಾಲಯ ಆದೇಶಿಸಿತ್ತು.
ಮೊದಲನೇ ಪೋಕ್ಸೋ ಪ್ರಕರಣದಲ್ಲಿ ನ.16 ರಂದು ಹೈಕೋರ್ಟ್ ನಿಂದ ಜಾಮೀನು ಪಡೆದು ಬಿಡುಗಡೆಯಾಗಿದ್ದರು.