Advertisement

ಧಾರವಾಡ : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ |ಇಬ್ಬರ ಬಂಧನ

06:34 PM Aug 28, 2021 | Team Udayavani |

ಧಾರವಾಡ : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗಳಿಬ್ಬರನ್ನು ಉಪನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

Advertisement

ಇಲ್ಲಿಯ ನೆಹರೂನಗರದ ಶ್ರೀನಿವಾಸ ಮತ್ತು ಗಣೇಶ ನಗರದ ಫಯೂಮ್ ಬಂಧಿತ ಆರೋಪಿಗಳು.

13 ವರ್ಷದ ಬಾಲಕಿಯನ್ನು ಪುಸಲಾಯಿಸಿ, ಕರೆದುಕೊಂಡು ಹೋದ ಆರೋಪಿಗಳು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಘಟನೆಯಿಂದ ಬಾಲಕಿ ಆರೋಗ್ಯ ಸಮಸ್ಯೆಗೆ ಒಳಗಾಗಿದ್ದು, ಆಸ್ಪತ್ರೆಗೆ ತಪಾಸಣೆಗೆ ಹೋದಾಗ ಈ ಕೃತ್ಯ ನಡೆದಿರುವುದು ಬೆಳಕಿಗೆ ಬಂದಿದೆ.

ಈ ಕುರಿತಂತೆ ಪೋಷಕರು ನೀಡಿದ ದೂರಿನ ಅನ್ವಯ, ಪೊಲೀಸರು ಆರೋಪಿಗಳನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next