Advertisement

ಕಪ್ಪು ಶಿಲೀಂಧ್ರ ಚುಚ್ಚುಮದ್ದು ಕಾಳಸಂತೆಯಲ್ಲಿ ಮಾರಾಟ: ಹುಬ್ಬಳ್ಳಿಯಲ್ಲಿ ಮೂವರ ಬಂಧನ

12:01 PM Jun 04, 2021 | Team Udayavani |

ಹುಬ್ಬಳ್ಳಿ: ಕಪ್ಪು ಶಿಲೀಂಧ್ರ (ಬ್ಲ್ಯಾಕ್ ಫಂಗಸ್) ಚುಚ್ಚುಮದ್ದು ಕಾಳಸಂತೆಯಲ್ಲಿ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಲ್ಲಿನ ಖಾಸಗಿ ಆಸ್ಪತ್ರೆಯೊಂದರ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

Advertisement

ಇಲ್ಲಿನ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಆಸ್ಪತ್ರೆಯಲ್ಲಿ  ಪಿಆರ್ ಒ, ವಾರ್ಡ್ ಬಾಯ್ ಸೇರಿದಂತೆ ಮೂವರನ್ನು ಚುಚ್ಚುಮದ್ದು ಕಾಳಸಂತೆಯಲ್ಲಿ ಮಾರಾಟ ಆರೋಪದಡಿ, ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ:ಕೋವಿಡ್ ಪರಿಸ್ಥಿತಿ ಸುಧಾರಣೆಯಾದರೆ ಮಾತ್ರ SSLC ಪರೀಕ್ಷೆ, ಇಲ್ಲದಿದ್ದರೆ ರದ್ದು: ಬಿಎಸ್ ವೈ

ಇಲ್ಲಿನ ಕಿಮ್ಸ್ ಆಸ್ಪತ್ರೆ ಹಿಂಭಾಗದ ಬೈಲಪ್ಪನವರ ನಗರದ ಪೈ ಹೊಟೇಲ್ ಬಳಿಯ ಔಷಧ ಅಂಗಡಿಯಲ್ಲಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿ ಇಂಜೆಕ್ಷನ್‌ ಸಮೇತ ಮೂವರನ್ನು ಬಂಧಿಸಿದ್ದಾರೆ.

ವಿದ್ಯಾನಗರ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next