Advertisement

Vitla: ಎರಡು ರಿಕ್ಷಾ ಮುಖಾಮುಖಿ ಢಿಕ್ಕಿ; ಓರ್ವ ಮೃತ್ಯು, ಹಲವರಿಗೆ ಗಾಯ

05:30 PM Feb 25, 2024 | Team Udayavani |

ವಿಟ್ಲ: ರಿಕ್ಷಾಗಳ ಅಪಘಾತ ಸಂಭವಿಸಿ ಓರ್ವ ಮೃತಪಟ್ಟು, 10ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ವಿಟ್ಲ-ಅಡ್ಯನಡ್ಕ ರಸ್ತೆಯ ಪಡಿಬಾಗಿಲು ಎಂಬಲ್ಲಿ ಸಂಭವಿಸಿದೆ.

Advertisement

ಎರುಂಬು ನಿವಾಸಿ ಹಮೀದ್ ಎರುಂಬು, ಪಡಿಬಾಗಿಲು ನಿವಾಸಿ ರವಿ ಪಡಿಬಾಗಿಲು ಅವರ ರಿಕ್ಷಾಗಳಾಗಿವೆ. ನೇರ ರಸ್ತೆಯಲ್ಲಿ ಢಿಕ್ಕಿ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಒಂದು ರಿಕ್ಷಾ ರಸ್ತೆ ಬದಿಯ ಚರಂಡಿಗೆ ಬಿದ್ದಿದೆ. ಘಟನೆಯಲ್ಲಿ ಅಳಿಕೆ ಗ್ರಾಮದ ಮಡಿಯಾಲ ನಿವಾಸಿ ಅಮ್ಮು ಮೂಲ್ಯ(69) ಅವರು ಮೃತಪಟ್ಟಿದ್ದಾರೆ.

ಗಾಯಗೊಂಡವರನ್ನು ವಿಟ್ಲ ಸಮುದಾಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಬೇರೆ ಕಡೆ ಕಳುಹಿಸುವ ಕಾರ್ಯವಾಗುತ್ತಿದೆ.

 

Advertisement

Udayavani is now on Telegram. Click here to join our channel and stay updated with the latest news.

Next