Advertisement

ಹಳಿ ತಪ್ಪಿಸುವ ಯತ್ನದ ಬಳಿಕ ಆಗ್ರಾ ರೈಲು ನಿಲ್ದಾಣದಲ್ಲಿ ಅವಳಿ ಸ್ಫೋಟ

02:34 PM Mar 18, 2017 | Team Udayavani |

 ಆಗ್ರಾ: ಇಲ್ಲಿನ ಕಂಟೋನ್ಮೆಂಟ್‌ ರೈಲು ನಿಲ್ದಾಣದಲ್ಲಿ ಶನಿವಾರ ಬೆಳಗ್ಗೆ  ಕಡಿಮೆ ತೀವ್ರತೆಯ 2 ಅವಳಿ ಸ್ಫೋಟಗಳು ಸಂಭವಿಸಿದ್ದು, ಯಾವುದೇ ಸಾವು ನೋವು ಸಂಭವಿಸಿಲ್ಲ.45 ನಿಮಿಷಗಳ ಅಂತರದಲ್ಲಿ 2 ಸ್ಫೋಟಗಳು ಸಂಭವಿಸಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Advertisement

ಶುಕ್ರವಾರ ರಾತ್ರಿ ಅಂಡಮಾನ್‌ ಎಕ್ಸ್‌ಪ್ರೆಸ್‌ ರೈಲನ್ನು ಹಳಿ ತಪ್ಪಿಸುವ ವಿಫ‌ಲ ಯತ್ನ ನಡೆದ ಬೆನ್ನಲ್ಲೇ ಈ ಸ್ಫೋಟಗಳು ನಡೆದಿದ್ದು ಉಗ್ರರು ನಡೆಸಿರುವ ಶಂಕೆ ವ್ಯಕ್ತವಾಗಿದೆ.

ಆಗ್ರಾದಲ್ಲಿ ಇಸ್ಲಾಮಿಕ್‌ ಮೂಲಭೂತವಾದಿಗಳು ದಾಳಿಯ ಬಗ್ಗೆ ಎಚ್ಚರಿಕೆ ನೀಡಿರುವ ಹಿನ್ನಲೆಯಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ.

ಸ್ಫೋಟ ನಡೆದ ಬಳಿಕ ರೈಲು ನಿಲ್ದಾಣಕ್ಕೆ ಪೊಲೀಸ್‌ ಅಧಿಕಾರಿಗಳು, ವಿಧಿ ವಿಜ್ಞಾನ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಮುಂದುವರೆಸಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next