Advertisement

ಹುಬ್ಬಳ್ಳಿ: ಕೋವಿಡ್ ಸೋಂಕಿನಿಂದ ಗುಣಮುಖರಾದ ಇಬ್ಬರು ಬಿಡುಗಡೆ

08:15 AM May 03, 2020 | keerthan |

ಹುಬ್ಬಳ್ಳಿ: ಕೋವಿಡ್-19 ಸೋಂಕಿನಿಂದ  ಗುಣಮುಖರಾಗಿರುವ ಇಬ್ಬರು ಮಕ್ಕಳನ್ನು ಇಲ್ಲಿನ ಕಿಮ್ಸ್ ನಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.

Advertisement

ಕೋವಿಡ್-19 ಪಾಸಿಟಿವ್ ದೃಢಪಟ್ಟಿದ್ದ 3.6 ವರ್ಷದ ಗಂಡು ಮಗು (ಪಿ- 234)    ಹಾಗೂ 07 ವರ್ಷದ‌ ಬಾಲಕಿ (ಪಿ-235 ) ಸದ್ಯ ಗುಣಮುಖರಾಗಿದ್ದು, 24 ಗಂಟೆಗಳ ಅಂತರದಲ್ಲಿ ಎರಡು ಬಾರಿ ಅವರು ಗಂಟಲು ದ್ರವ ಪರೀಕ್ಷೆ ಮಾಡಿದಾಗ ಕೋವಿಡ್ ನೆಗೆಟಿವ್ ವರದಿ ಬಂದಿದೆ.

ಎಕ್ಸ್ ರೇ ಮೂಲಕ ಪರೀಕ್ಷೆ ಮಾಡಿ ಶ್ವಾಸಕೋಶದ ತೊಂದರೆ ಇಲ್ಲ ಎಂಬುದನ್ನೂ ಕೂಡ ವೈದ್ಯರು ದೃಢಪಡಿಸಿದ್ದರಿಂದ ಈ ಇಬ್ಬರೂ ಮಕ್ಕಳನ್ನು ಬಿಡುಗಡೆ ಮಾಡಲಾಗಿದೆ. ಈ ಮಕ್ಕಳ ಆರೈಕೆಗಾಗಿ ಆಸ್ಪತ್ರೆಯಲ್ಲಿದ್ದ ಇವರ ತಾಯಿಗೆ ಕೋವಿಡ್ ತಗುಲಿರಲಿಲ್ಲ. ಆದರೂ ಪರೀಕ್ಷಿಸಿ ನೆಗೆಟಿವ್ ವರದಿ ಬಂದ ನಂತರ ಮಕ್ಕಳೊಂದಿಗೆ ಕಳುಹಿಸಿಕೊಡಲಾಯಿತು.

ಜಿಲ್ಲೆಯಲ್ಲಿ ಇದುವರೆಗೆ ನಾಲ್ವರು ಕೋವಿಡ್-19 ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ಆರು ಜನ ಕಿಮ್ಸ್ ನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next