Advertisement
ಎಂದಿನಂತೆ ಮುಂಜಾನೆ 9 ಗಂಟೆಗೆ ಮನೆಯಿಂದ ಆಟವಾಡಲು ಅಂಗಳಕ್ಕೆ ತೆರಳಿದ ಬಾಲಕರು ಆಯ ತಪ್ಪಿ ನೀರಿನ ಹೊಂಡಕ್ಕೆ ಬಿದ್ದಿದ್ದಾರೆ.
Related Articles
Advertisement
ಇದಕ್ಕೆ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯವೇ ಕಾರಣ ಎಂದು ಪೋಷಕರು ಹಾಗೂ ಸ್ಥಳಿಕರು ಆಕ್ರೋಶ ವ್ಯಕ್ತಪಡಿಸಿ ಕಟ್ಟಡ ಕಾಮಗಾರಿಗೆ ಸುರಕ್ಷತಾ ಕ್ರಮಗಳಲ್ಲಿದೇ ಈ ದುರ್ಘಟನೆಗೆ ಕಾರಣವಾಗಿದೆ ಎಂದೂ ದೂರಿದ್ದಾರೆ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ರಾಮನಗೌಡ ಹಟ್ಟಿ, ಸಿಪಿಐ ಕರುಣೇಶಗೌಡ ಜೆ, ಪಿಎಸ್‍ಐ ಪ್ರವೀಣ ಗಂಗೋಳ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಅನುದಾನ ಕುರಿತು ಸರಕಾರಕ್ಕೆ ಪತ್ರ ಬರೆಯಲಾಗಿದೆ. ಕಾಮಗಾರಿ ಮುಕ್ತಾಯ ಹಂತದಲ್ಲಿದ್ದು ಸೂಕ್ತ ಕ್ರಮ ಕೈಗೊಳ್ಳಲಾಗುವದು. ಕಾಮಗಾರಿ ಅವಧಿ ಕುರಿತು ಉಲ್ಲೇಖ ಇರುವದಿಲ್ಲವೆಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಸವರಾಜ ಕುರಿಹುಳಿ ಉದಯವಾಣಿಗೆ ಮಾಹಿತಿ ನೀಡಿದ್ದಾರೆ.
ಅಧಿಕಾರಿಗಳನ್ನು ಅಮಾನತ್ತು ಮಾಡಿ. ನೊಂದ ಕುಟುಂಬಗಳಿಗೆ ಪರಿಹಾರ ಒದಗಿಸಿ. ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳಕ್ಕೆ ಭೇಟಿ ನೀಡಿ ಇಲಾಖೆಗೆ ಸೂಕ್ತ ಕ್ರಮವಹಿಸುವಂತೆ ಆದೇಶಿಸಬೇಕು. ಇಲ್ಲವಾದಲ್ಲಿ ಕೆಲವೇ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವದೆಂದು ಮೃತ ಶ್ಲೋಕನ ಸಂಬಂಧಿ ಗಂಗಯ್ಯ ಅಮೋಘಿಮಠ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ತಾಲೂಕಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ 1.5 ಕೋಟಿ ಅನುದಾನದಲ್ಲಿ ಲ್ಯಾಂಡ್ ಆರ್ಮಿಗೆ ಭವನ ನಿರ್ಮಿಸಲು ಹಂಚಿಕೆಯಾಗಿತ್ತು. 2017 ರಲ್ಲಿ ಆರಂಭಗೊಂಡು ಕಾಮಗಾರಿ ಅನುದಾನ ನೀಡುತ್ತಿಲ್ಲವೆಂದು ಸುಮಾರು 5 ವರ್ಷದಿಂದ ಕಾಮಗಾರಿ ಸ್ಥಗಿತಗೊಂಡಿತು. ಭವನದ ಸುತ್ತ ಸುರಕ್ಷತಾ ಕ್ರಮಗಳನ್ನಿರಿಸದೇ ಅಧಿಕಾರಿಗಳು ನಿರ್ಲಕ್ಷವಹಿಸಿದ್ದಾರೆ. ಘಟನೆ ಕುರಿತು ಕೆಆರ್‍ಐಡಿಎಲ್ ಎಇಇ ಪ್ರಭುಕುಮಾರ ವಿರುದ್ಧ ಕುಟುಂಬಸ್ಥರು ಹಾಗೂ ಜನತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಸ್ಯಾಂಟ್ರೊ ರವಿ ಬಂಧನಕ್ಕೆ ತಂಡ ರಚನೆ, ಲುಕ್ ಔಟ್ ನೋಟಿಸ್ ಜಾರಿ: ಎಡಿಜಿಪಿ ಅಲೋಕ್ ಕುಮಾರ್