Advertisement

ಸಂಜಯನಗರ:ಪುಟ್ಟ ಮಕ್ಕಳಿಬ್ಬರಿಗೆ ಬೆಂಕಿ ಹಚ್ಚಿ ತಾಯಿ ಆತ್ಮಹತ್ಯೆ 

12:12 PM Feb 15, 2018 | Team Udayavani |

ಬೆಂಗಳೂರು: ನಗರದ ಮಾರತ್‌ಹಳ್ಳಿ ಬಳಿಯಿರುವ ಸಂಜಯ್‌ನಗರ ದಲ್ಲಿ ತಾಯಿಯೊಬ್ಬಳು ತನ್ನ ಪುಟ್ಟ ಮಕ್ಕಳಿಬ್ಬರನ್ನು ಬೆಂಕಿ ಹಚ್ಚಿ ಹತ್ಯೆಗೈದು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಗುರುವಾರ ನಡೆದಿದೆ. 

Advertisement

ರಾಮಲಿಂಗಮ್ಮ ಎಂಬಾಕೆ 4 ವರ್ಷದ ಮಗ ಮತ್ತು 2 ವರ್ಷದ ಮಗಳಿಗೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ತಾನು ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾಗಿದ್ದಾಳೆ.

ರಾಮಲಿಂಗಮ್ಮ ಮಾನಸಿಕ ಅಸ್ವಸ್ಥಳಾಗಿದ್ದಳು ಎಂದು ಹೇಳಲಾಗಿದೆ. 

ಹೆಎಚ್‌ಎಎಲ್‌ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next