ಗದಗ: ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯ ಸೆಟಲ್‌ಮೆಂಟ್ ಏರಿಯಾ ಹಾಗೂ ಗದಗ ತಾಲೂಕಿನ ಕೋಟುಮಚಗಿ ಗ್ರಾಮದ ವಾರ್ಡ್ ನಂ. 1 ಮತ್ತು 2ರ ವ್ಯಾಪ್ತಿಯ ಪ್ರದೇಶವನ್ನು ಕಂಟೈನ್ಮೆಂಟ್ ಪ್ರದೇಶವೆಂದು ಘೊಷಿಸಿ, ಉಭಯ ಪ್ರದೇಶಗಳಿಗೆ ಗದಗ ತಹಶಿಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ ಅವರನ್ನು ಇನ್ಸಿಂಡೆಂಟ್ ಕಮಾಂಡರ್ ಎಂದು ನೇಮಿಸಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ.
ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯ ಸೆಟಲ್‌ಮೆಂಟ್ ಏರಿಯಾ ವಾರ್ಡ್ ನಂ.2ರ ಸುತ್ತಲಿನ 100 ಮೀ. ಪ್ರದೇಶವನ್ನು ನಿಯಂತ್ರಿತ ಪ್ರದೇಶವೆಂದು ಮತ್ತು
ಪ್ರದೇಶದ ವ್ಯಾಪ್ತಿಯ ಸುತ್ತಲಿನ 5 ಕಿ.ಮೀ. ವ್ಯಾಪ್ತಿಯ ಸುತ್ತಳತೆಯ ಪ್ರದೇಶವನ್ನು ಬಫರ್ ಝೋನ್ ಎಂದು ಘೋಷಿಸಲಾಗಿದೆ. ಅದರಂತೆ ತಾಲೂಕಿನ ಕೋಟುಮಚಗಿ ಗ್ರಾಮದ ವಾರ್ಡ್ ನಂ. 1 ಮತ್ತು 2 ರ ಸುತ್ತಲಿನ 100 ಮೀ. ಪ್ರದೇಶವನ್ನು ನಿಯಂತ್ರಿತ ಪ್ರದೇಶವೆಂದು ಮತ್ತು ಪ್ರದೇಶದ ವ್ಯಾಪ್ತಿಯ ಸುತ್ತಲಿನ 7 ಕಿ.ಮೀ. ವ್ಯಾಪ್ತಿಯ ಪ್ರದೇಶವನ್ನು ಬಫರ್‌ಝೋನ್ ಎಂದು ಘೋಷಿಸಿ, ಜಿಪಂ ಯೋಜನಾ ನಿರ್ದೇಶಕ ಸಿ.ಆರ್.ಮುಂಡರಗಿ ಅವರನ್ನು ಇನ್ಸಿಂಡೆಂಟ್ ಕಮಾಂಡರ್ ಎಂದು ನೇಮಿಸಿದ್ದಾರೆ.
ಕಂಟೈನ್‌ಮೆಂಟ್, ಬಫರ್ ಝೋನ್ ಮತ್ತು ಕ್ಲಸ್ಟರ್‌ಗಳಲ್ಲಿ ಕೊರೋನಾ ವೈರಸ್ ನಿಯಂತ್ರಿಸುವ ಕುರಿತು ಕಾರ್ಯನಿರ್ವಹಿಸುವ ಅಧಿಕಾರಿಗಳಿಗೆ ಹಾಗೂ ಇಲಾಖೆಗಳಿಗೆ ಸರ್ಕಾರದ ಮಾರ್ಗಸೂಚಿಗಳನ್ವಯ ಜಿಲ್ಲಾ ಧಿಕಾರಿಗಳು ಕರ್ತವ್ಯಗಳನ್ನು ನಿಗದಿಪಡಿಸಿರುತ್ತಾರೆ. ಈ ಆದೇಶವನ್ನು ಉಲ್ಲಂಘಿಸಿದವರ ಮೇಲೆ ವಿಪತ್ತು ನಿರ್ವಹಣಾ ಕಾಯ್ದೆ- 2005 ರನ್ವಯ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.