Advertisement

ಬೆಳಗಾವಿ: ಕೋವಿಡ್-19 ಸೋಂಕಿನಿಂದ ಗುಣಮುಖರಾದ ಇಬ್ಬರು ಆಸ್ಪತ್ರೆಯಿಂದ ಬಿಡುಗಡೆ

11:06 PM Apr 30, 2020 | keerthan |

ಬೆಳಗಾವಿ: ಕೋವಿಡ್-19 ಸೋಂಕು ತಗುಲಿದ್ದ ಜಿಲ್ಲೆಯ ಇಬ್ಬರು ಮಹಿಳೆಯರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ ಎಂದು ಬಿಮ್ಸ್ ನಿರ್ದೇಶಕರಾದ ಡಾ.ವಿನಯ ದಾಸ್ತಿಕೊಪ್ಪ ಅವರು ತಿಳಿಸಿದ್ದಾರೆ

Advertisement

ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಯಬಾಗ ತಾಲ್ಲೂಕಿನ ಕುಡಚಿಯ 67 ವರ್ಷದ (ಪಿ-149) ಮತ್ತು 36 ವರ್ಷದ (ಪಿ-147) ಅವರನ್ನು ಇಂದು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿರುತ್ತದೆ.

ಇವರು ಕ್ರಮವಾಗಿ ಏ.1 ಹಾಗೂ ಮಾ.31 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು 69 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಇದೀಗ ಒಟ್ಟಾರೆ ಹತ್ತು ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಬ್ಬರು ಮೃತಪಟ್ಟಿರುತ್ತಾರೆ.

ರಾಜ್ಯದಲ್ಲಿ ಇಂದು 22 ಹೊಸ ಕೋವಿಡ್-19 ಪ್ರಕರಣಗಳು ದೃಢವಾಗದೆ. ಇದಿರಂದಾಗಿ ರಾಜ್ಯದಲ್ಲಿ 557 ಸೋಂಕು ಪ್ರಕರಣಗಳು ದೃಢವಾದಂತಾಗಿದೆ. ಅವುಗಳ ಪೈಕಿ 21 ಪ್ರಕರಣಗಳು ಮರಣ ಹೊಂದಿದೆ. ಮತ್ತು 223 ಪ್ರಕರಣಗಳು ಆಸ್ಪತ್ರೆಯಿಂದ ಬಿಡುಗಡೆಯಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next