Advertisement

ಮುಂಬಯಿ: ಬಹುಮಹಡಿ ಕಟ್ಟಡದಲ್ಲಿ ಅಗ್ನಿ ದುರಂತ; 6 ಸಾವು, ಹಲವು ಮಂದಿ ಆಸ್ಪತ್ರೆಗೆ ದಾಖಲು

06:29 PM Jan 22, 2022 | Team Udayavani |

ಮುಂಬಯಿ: ವಾಣಿಜ್ಯ ನಗರಿ ಮುಂಬಯಿಯ ಬಹುಮಹಡಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ 6 ಮಂದಿ ಸಾವನ್ನಪ್ಪಿರುವ ಘಟನೆ ಭಾಟಿಯಾ ಆಸ್ಪತ್ರೆ ಸಮೀಪದ ಟಾರ್ಡಿಯೊ ಪ್ರದೇಶದಲ್ಲಿ ಶನಿವಾರ (ಜನವರಿ 22) ಬೆಳಗ್ಗೆ ನಡೆದಿದೆ.

Advertisement

ಇದನ್ನೂ ಓದಿ:ಭಾರತ: 24ಗಂಟೆಯಲ್ಲಿ 3.37 ಲಕ್ಷ ಕೋವಿಡ್ ಪ್ರಕರಣ ಪತ್ತೆ, 10,000 ಗಡಿದಾಟಿದ ಒಮಿಕ್ರಾನ್

ಭಾಟಿಯಾ ಆಸ್ಪತ್ರೆ ಸಮೀಪ ಇರುವ 20 ಮಹಡಿಯ ಕಮಲಾ ಬಿಲ್ಡಿಂಗ್ ನಲ್ಲಿ ಈ ಅಗ್ನಿ ದುರಂತ ಸಂಭವಿಸಿದ್ದು, 6 ಮಂದಿ ಸಾವನ್ನಪ್ಪಿರುವುದಾಗಿ ಬೃಹನ್ಮುಂಬಯಿ ಮುನ್ಸಿಪಲ್ ಕಾರ್ಪೋರೇಷನ್ ತಿಳಿಸಿದೆ.

ಅಗ್ನಿ ಅನಾಹುತದದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನಾ ಸ್ಥಳದಲ್ಲಿ ಐದು ಆ್ಯಂಬುಲೆನ್ಸ್ ಗಳಿದ್ದು, ಜನರನ್ನು ಆಸ್ಪತ್ರೆಗೆ ರವಾನಿಸಲಾಗುತ್ತಿದೆ ಎಂದು ವರದಿ ವಿವರಿಸಿದೆ. ಬೆಂಕಿ ನಂದಿಸಲು ಒಟ್ಟು 13 ಅಗ್ನಿಶಾಮಕ ದಳದ ಸಿಬಂದಿಗಳು ಶ್ರಮಿಸುತ್ತಿರುವುದಾಗಿ ವರದಿ ಹೇಳಿದೆ.

ಬಹುಮಹಡಿ ಕಟ್ಟಡದ ಮೇಲಂತಸ್ತಿನಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ನಿವಾಸಿಗಳು ಭೀತಿಗೊಳಗಾಗಿದ್ದು, ದಟ್ಟವಾದ ಹೊಗೆಯಿಂದಾಗಿ ಆರು ಮಂದಿ ವೃದ್ಧರಿಗೆ ಆಕ್ಸಿಜನ್ ಬೇಕಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಿಎಂಸಿ ಮೇಯರ್ ಕಿಶೋರಿ ಪೆಡ್ನೇಕರ್ ತಿಳಿಸಿದ್ದಾರೆ.

Advertisement

ಕಟ್ಟಡದಲ್ಲಿ ಬೆಂಕಿ ಯಾವ ಕಾರಣದಿಂದ ಹೊತ್ತಿಕೊಂಡಿದೆ ಎಂಬುದು ಇನ್ನಷ್ಟೇ ತಿಳಿದುಬರಬೇಕಾಗಿದೆ ಎಂದು ಮೇಯರ್ ತಿಳಿಸಿದ್ದು, ಬೆಂಕಿ ನಂದಿಸುವ ಕಾರ್ಯ ಮುಂದುವರಿದಿರುವುದಾಗಿ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next