ವಿಜಯಪುರ: ಬಟ್ಟೆ ತೊಳೆಯಲು ಕೃಷ್ಣಾ ಮೇಲ್ದಂಡೆ ಯೋಜನೆಯ ಕಾಲುವೆಗೆ ಹೋಗಿದ್ದಾಗ ಓರ್ವ ಬಾಲಕ ಸೇರಿ ಇಬ್ಬರು ಜಲ ಸಮಾಧಿಯಾಗಿರುವ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನಲ್ಲಿ ಜರುಗಿದೆ.
ಮೃತರನ್ನು ಬಾಗಲಕೋಟ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಚಿಮ್ಮಡ ಗ್ರಾಮದ ರಸೂಲ್ ಮಾಲದಾರ (26) ಹಾಗೂ ಸಮೀವುಲ್ಲಾ ಗೊಳಸಂಗಿ (10) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:‘ವಿದ್ಯಾರ್ಥಿ ಭವನ್’ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಮುದ್ದೇಬಿಹಾಳ ಪಟ್ಟಣದಲ್ಲಿ ಚಿಕನ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು, ಗುರುವಾರ ಬೆಳಿಗ್ಗೆ ಬಟ್ಟೆ ತೊಳೆಯಲು ಪಟ್ಟಣದ ಹೊರವಲಯದಲ್ಲಿರುವ ಹಡಲಗೇರಿ ಬಳಿಯ ನಾಲೆಗೆ ಹೋಗಿದ್ದರು. ಕೃಷ್ಣಾ ಮೇಲ್ದಂಡೆ ಯೋಜನೆಯ ಸದರಿ ನಾಲೆ ತುಂಬಿ ಹರಿಯುತ್ತಿದ್ದು, ಬಟ್ಟೆ ತೊಳೆಯಲು ಇಬ್ಬರೂ ನಾಲೆಗೆ ಇಳಿದಾಗ ಕೊಚ್ಚಿಕೊಂಡು ಹೋಗಿದ್ದಾರೆ.
Related Articles
ಸುದ್ದಿ ತಿಳಿದು ಅಗ್ನಿಶಾಮಕ ಸೇವೆಯ ಸಿಬ್ಬಂದಿ ಜೊತೆ ಸ್ಥಳಕ್ಕೆ ಧಾವಿಸಿದ ಮುದ್ದೇಬಿಹಾಳ ಪೊಲೀಸರು ಶವಗಳನ್ನು ಹೊರ ತೆಗೆಯುವ ಕೆಲಸದಲ್ಲಿ ತೊಡಗಿದ್ದಾರೆ.