ಬೆಂಗಳೂರು: ಕೇರಳದಿಂದ ಬೆಂಗಳೂರಿಗೆ ಮಾದಕ ವಸ್ತು ಎಂಡಿಎಂಎ ಕ್ರಿಸ್ಟಲ್ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರು ಪೆಡ್ಲರ್‌ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಕೇರಳ ಮೂಲದ ಜೋವಿನ್ ಜಾನ್ಸನ್ (26) ಮತ್ತು ಪ್ರಣವ್ ಮೋಹನ್ (30) ಬಂಧಿತರು.
ಆರೋಪಿಗಳಿಂದ 20 ಲಕ್ಷ ರೂ. ಮೌಲ್ಯದ 200 ಗ್ರಾಂ ಎಂಡಿಎಂಎ ಕ್ರಿಸ್ಟಲ್, 2 ಮೊಬೈಲ್ ಮತ್ತು ಒಂದು ಎಲೆಕ್ಟ್ರಾನಿಕ್ ತೂಕದ ಯಂತ್ರ ಹಾಗೂ ಇತರೆ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.
ಕೇರಳ ಮೂಲದ ಆರೋಪಿಗಳು ಮಾರತ್ತ ಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ತಿಂಗಳಿಗೊಮ್ಮೆ ಕೇರಳಕ್ಕೆ ಹೋಗಿ, ಬರುವಾಗ ಕಡಿಮೆ ಮೊತ್ತಕ್ಕೆ ಎಂಡಿಎಂಎ ಕ್ರಿಸ್ಟಲ್‌ಗಳನ್ನು ತರುತ್ತಿದ್ದರು. ಬಳಿಕ ಪ್ರತಿ ಗ್ರಾಂಗೆ 8 ರಿಂದ 10 ಸಾವಿರ ರೂ.ಗೆ ವಿದ್ಯಾರ್ಥಿಗಳು, ಟೆಕ್ಕಿಗಳು ಹಾಗೂ ವ್ಯಸನಿಗಳಿಗೆ ಮಾರಾಟ ಮಾಡುತ್ತಿದ್ದರು. ಮಾಹಿತಿ ಮೇರೆಗೆ ದಾಳಿ ನಡೆಸಿ ಮಾಲು ಸಮೇತ ಆರೋಪಿಗಳನ್ನು ಬಂಧಿಸಲಾಗಿದೆ.
ಇದನ್ನೂ ಓದಿ:ದೆಹಲಿಯಲ್ಲಿ ಯಾವ ವರಿಷ್ಠರನ್ನೂ ಭೇಟಿ ಮಾಡಿಲ್ಲ : ಆರಗ ಜ್ಞಾನೇಂದ್ರ
ಆರೋಪಿಗಳ ವಿರುದ್ಧ ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ಎನ್‌ಡಿ ಪಿಎಸ್ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು.