ನೇಪಾಳ: ನೇಪಾಳದ ಬಾಜುರಾದ ದಹಕೋಟ್ ನಲ್ಲಿ ಶುಕ್ರವಾರ ಬೆಳಗಿನ ಜಾವ ಎರಡು ಗಂಟೆಯೊಳಗೆ ಎರಡು ಭೂಕಂಪಗಳು ಸಂಭವಿಸಿವೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಮೊದಲ ಭೂಕಂಪವು ರಿಕ್ಟರ್ ಮಾಪಕದಲ್ಲಿ 4.8 ರಷ್ಟಿತ್ತು, ರಾತ್ರಿ 11:58 ಕ್ಕೆ (ಸ್ಥಳೀಯ ಕಾಲಮಾನ) ಸಂಭವಿಸಿದೆ, ನಂತರ ಶುಕ್ರವಾರ ಮುಂಜಾನೆ 1:30 ಕ್ಕೆ 5.9 ರ ತೀವ್ರತೆಯೊಂದಿಗೆ ಮತ್ತೊಂದು ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಕೇಂದ್ರ ತಿಳಿಸಿದೆ.
ನೇಪಾಳದ ಸುರ್ಖೇತ್ ಜಿಲ್ಲೆಯ ಭೂಕಂಪನ ಕೇಂದ್ರದ ಅಧಿಕಾರಿ ರಾಜೇಶ್ ಶರ್ಮಾ ಅವರು ಎರಡು ಭೂಕಂಪಗಳು ಪರಸ್ಪರ ಎರಡು ಗಂಟೆಗಳ ಅಂತರದಲ್ಲಿ ಸಂಭವಿಸಿವೆ ಎಂದು ಹೇಳಿದ್ದಾರೆ.
ಭೂಕಂಪದಿಂದ ಭಯಭೀತರಾದ ಜನರು ಮನೆಯಿಂದ ಓಡಿ ಬಂದರು. ನೇಪಾಳದಲ್ಲಿ ಇತ್ತೀಚಿನ ದಿನಗಳಲ್ಲಿ ಭೂಕಂಪಗಳು ಆಗಾಗ ಸಂಭವಿಸುತ್ತಿವೆ.
Related Articles
ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.