Advertisement

Mumbai: ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ… ಇಬ್ಬರು ಮೃತ್ಯು, ಮೂವರಿಗೆ ಗಾಯ

03:23 PM Oct 23, 2023 | Team Udayavani |

ಮುಂಬೈ: ಬಹುಮಹಡಿ ಕಟ್ಟದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಇಬ್ಬರು ಮೃತಪಟ್ಟು ಮೂವರು ಗಾಯಗೊಂಡಿರುವ ಘಟನೆ ಮುಂಬೈನ ಕಾಂದಿವಲಿಯಲ್ಲಿ ಸಂಭವಿಸಿದೆ.

Advertisement

ಪವನ್ ಧಾಮ್ ವೀಣಾ ಸಂತೂರ್ ಕಟ್ಟಡದ ಮೊದಲ ಮಹಡಿಯಲ್ಲಿ ಸೋಮವಾರ ಭಾರಿ ಬೆಂಕಿ ಕಾಣಿಸಿಕೊಂಡು ದುರಂತ ಸಂಭವಿಸಿದೆ.

ಮೃತರನ್ನು ಗ್ಲೋರಿ ವಾಲ್ಫಾಟಿ (43) ಮತ್ತು ಜೋಸು ಜೆಮ್ಸ್ ರಾಬರ್ಟ್ (8) ಎಂದು ಗುರುತಿಸಲಾಗಿದೆ.

ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ನು ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸುತಿದ್ದಂತೆ ಘಟನಾ ಸ್ಥಳಕ್ಕೆ ಎಂಟು ಅಗ್ನಿಶಾಮಕ ವಾಹನ ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ.

ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Advertisement

ಇದನ್ನೂ ಓದಿ: Job- Search: ಉದ್ಯೋಗ ಸಿಗುವ ಆಸೆಯಲ್ಲಿ ತನ್ನಲ್ಲಿದ್ದ 6 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ

Advertisement

Udayavani is now on Telegram. Click here to join our channel and stay updated with the latest news.

Next