Advertisement

Sadalwood: ಶ್ರೀಮುರಳಿ ಬರ್ತ್‌ಡೇಗೆ ಎರಡು ಚಿತ್ರ ಘೋಷಣೆ

12:19 PM Dec 18, 2024 | Team Udayavani |

ʼಬಘೀರ’ ಚಿತ್ರದ ಮೂಲಕ ಯಶಸ್ಸಿನ ನಗೆ ಬೀರಿದ ನಟ ಶ್ರೀಮುರಳಿ ಅವರಿಗೆ ಮಂಗಳವಾರ ಬರ್ತ್‌ಡೇ ಸಂಭ್ರಮ. ಈ ಹಿನ್ನೆಲೆಯಲ್ಲಿ ಅವರ ಎರಡು ಹೊಸ ಚಿತ್ರಗಳು ಘೋಷಣೆಯಾಗಿವೆ. ತೆಲುಗಿನ ಖ್ಯಾತ ಚಿತ್ರ ನಿರ್ಮಾಣ ಸಂಸ್ಥೆ ಪೀಪಲ್‌ ಮೀಡಿಯಾ ಫ್ಯಾಕ್ಟರಿ ಜತೆಗೆ ಕೈ ಜೋಡಿಸಿದ್ದಾರೆ. ಈ ಸಂಸ್ಥೆ ನಿರ್ಮಾಣ ಮಾಡಲಿರುವ ಸಿನಿಮಾದಲ್ಲಿ ನಾಯಕನಾಗಿ ಶ್ರೀಮುರಳಿ ನಟಿಸಲಿದ್ದಾರೆ.

Advertisement

ಪೀಪಲ್‌ ಮೀಡಿಯಾ ಫ್ಯಾಕ್ಟರಿ ಈ ಸಿನಿಮಾ ನಿರ್ಮಾಣದ ಮೂಲಕ ಕನ್ನಡ ಚಿತ್ರೋದ್ಯಮ ಪ್ರವೇಶಿಸುತ್ತಿದೆ. ಈಗಾಗಲೇ ಕನ್ನಡದ ನಿರ್ಮಾಣ ಸಂಸ್ಥೆಗಳು ಪರಭಾಷೆ ಸಿನಿಮಾ ನಿರ್ಮಾಣದಲ್ಲಿ ತೊಡಗಿವೆ. ಈಗ ಬೇರೆ ಭಾಷೆ ಸಂಸ್ಥೆ ಕನ್ನಡಕ್ಕೆ ಆಗಮಿಸಿದೆ. ಹೀಗೆ ಆಗಮಿಸಿದ್ದು ಖುಷಿಯ ವಿಚಾರವೂ ಹೌದು.

ಬಘೀರ ಸಿನಿಮಾದ ಯಶಸ್ಸಿನ ಬಳಿಕ ಈಗ ಇನ್ನೊಂದು ಸಿನಿಮಾದ ಭಾಗವಾಗುತ್ತಿದ್ದಾರೆ ಶ್ರೀಮುರಳಿ. ಸದ್ಯ ಶ್ರೀಮುರಳಿ ಬರ್ತ್‌ಡೇಗೆ ಅಧಿಕೃತ ಪೋಸ್ಟರ್‌ ಬಿಡುಗಡೆ ಆಗಿದೆ. ಪೀಪಲ್‌ ಮೀಡಿಯಾ ಫ್ಯಾಕ್ಟರಿ, ಮುಂದಿನ ದಿನಗಳಲ್ಲಿ ನಿರ್ದೇಶಕರು, ಚಿತ್ರದ ಶೀರ್ಷಿಕೆ, ತಾರಾಗಣ ಮತ್ತು ತಾಂತ್ರಿಕ ವರ್ಗದ ಬಗ್ಗೆ ಮಾಹಿತಿ ನೀಡಲಿದೆ.

ಮಾರ್ಚ್‌ನಿಂದ ಪರಾಕ್‌: ಇನ್ನು ಬರ್ತ್‌ಡೇ ಹಿನ್ನೆಲೆಯಲ್ಲಿ “ಪರಾಕ್‌’ ಎಂಬ ಹೊಸ ಚಿತ್ರ ಘೋಷಣೆಯಾಗಿದೆ. ಒಂದು ಕೈಯಲ್ಲಿ ಗನ್‌ ಹಿಡಿದು ಬೆನ್ನು ತೋರಿಸುತ್ತಿರುವ ಜೊತೆಗೆ, ಬೆನ್ನಿಗೆ ಪಿಸ್ತೂಲ್‌ ಹಾಕಿರುವ ಪೋಸ್ಟರ್‌ ಬಿಡುಗಡೆಯಾಗಿದೆ. ನವ ನಿರ್ದೇಶಕ ಹಾಲೇಶ್‌ ಕೋಗುಂಡಿ ಈ ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ. ಒಂದಷ್ಟು ಕಿರು ಚಿತ್ರಗಳನ್ನು ನಿರ್ದೇಶಿಸಿ ಅನುಭವವಿರುವ ಹಾಲೇಶ್‌, ಪರಾಕ್‌ ಸಿನಿಮಾ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಮಾರ್ಚ್‌ನಲ್ಲಿ ಪರಾಕ್‌ ಚಿತ್ರದ ಶೂಟಿಂಗ್‌ ಶುರುವಾಗಲಿದೆ. ದೊಡ್ಡ ಬಜೆಟ್‌ , ದೊಡ್ಡ ತಾರಾಗಣದಲ್ಲಿ ಚಿತ್ರ ನಿರ್ಮಾಣ ಮಾಡಲು ಚಿತ್ರ ಸಜ್ಜಾಗುತ್ತಿದೆ. ಬ್ರಾಂಡ್‌ ಸ್ಟುಡಿಯೋಸ್‌ ಬ್ಯಾನರ್‌ನಡಿ ಪರಾಕ್‌ ಸಿನಿಮಾ ನಿರ್ಮಾಣವಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next