ಬೆಂಗಳೂರು: “ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೇ ಪ್ರಕರಣದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಎರಡು ಎಫ್ಐಆರ್ ಹಾಕಲು ಅವಕಾಶವಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಗಣಪತಿ ಸಾವಿನ ಪ್ರಕರಣದಲ್ಲಿ ಜಾರ್ಜ್ ವಿರುದಟಛಿ
ಈಗಾಗಲೇ ಮಡಿಕೇರಿಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಬಿಐ ಮತ್ತೂಂದು ಎಫ್ಐಆರ್ ದಾಖಲಿಸಲು ಸಿಆರ್‌ಪಿಸಿ 154ರ ಪ್ರಕಾರ ಅವಕಾಶವಿಲ್ಲ ಎಂದು ಹೇಳಿದರು.
ಡಿವೈಎಸ್‌ಪಿ ಗಣಪತಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಆದೇಶದಂತೆ ಸಿಬಿಐ ಈಗಾಗಲೇ ದಾಖಲಾಗಿರುವ ಎಫ್ಐಆರ್‌ನ್ನು ಮತ್ತೆ ಮರುದಾಖಲಿಸಿದ್ದಾರೆ. ಬಿಜೆಪಿಯವರು ಸರಿಯಾದ ಮಾಹಿತಿ ತಿಳಿದುಕೊಳ್ಳದೇ ರಾಜಕೀಯ ಉದ್ದೇಶಕ್ಕೆ ಜಾರ್ಜ್ ರಾಜೀನಾಮೆ ಕೇಳುತ್ತಿದ್ದಾರೆ. ಅವರು ರಾಜೀನಾಮೆ ಕೊಡುವ ಅಗತ್ಯವಿಲ್ಲ ಎಂದು ಪರಮೇಶ್ವರ್ ಹೇಳಿದರು.
ಈಗಾಗಲೇ ಸಿಐಡಿ ಪಾರದರ್ಶಕವಾಗಿ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಸರ್ಕಾರ ಸಿಐಡಿ ವರದಿಯನ್ನು ಒಪ್ಪಿಕೊಂಡಿದೆ. ಸಿಬಿಐ ಪಾರದರ್ಶಕ ತನಿಖೆ ನಡೆಸಲಿ, 3 ತಿಂಗಳಲ್ಲಿ ಸಿಬಿಐ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.