Advertisement

ಬೊಲೆರೋ ವಾಹನದಲ್ಲಿ ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ

03:43 PM Jun 26, 2020 | keerthan |

ಶಿವಮೊಗ್ಗ: ಬೊಲೆರೋ ಪಿಕ್ ಅಪ್ ವಾಹನದಲ್ಲಿ ಅಕ್ರಮ ಗೋಸಾಗಾಟ ಮಾಡುತ್ತಿದ್ದ ಇಬ್ಬರು ಪೊಲೀಸರ ಅತಿಥಿಗಳಾದ ಘಟನೆ ಜಿಲ್ಲೆಯ ಕಾನೆಹಳ್ಳ ಸಮೀಪ ಶುಕ್ರವಾರ ನಡೆದಿದೆ.

Advertisement

ತೀರ್ಥಹಳ್ಳಿ ರಸ್ತೆಯ ಕಾನೆಹಳ್ಳ ಸಮೀಪದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಗೋ ಸಾಗಣೆ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಟಿಪ್ಪುನಗರದ ಮೊಹಮದ್ (25) ಹಾಗೂ ಚಾಂದ್ ಪೀರ್ (45) ಪ್ರಕರಣದಲ್ಲಿ ಬಂಧಿತ ಅರೋಪಿಗಳು.

ಆರೋಪಿಗಳು ಬೊಲೆರೋ ಪಿಕ್ ಅಪ್ ವಾಹನದಲ್ಲಿ ಸುಮಾರು 50 ಸಾವಿರ ರೂ. ಬೆಲೆಯ ಎಂಟು ಹಸುಗಳನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಶಿವಮೊಗ್ಗದ ತುಂಗಾನಗರ ಪಿಎಸ್ಐ ತಿರುಮಲೇಶ್ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಲಾಗಿದೆ.

ಶಿವಮೊಗ್ಗದ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next