Advertisement

ಪುಲ್ವಾಮಾ; ಭದ್ರತಾ ಪಡೆಯ ಎನ್ ಕೌಂಟರ್ ಗೆ ಇಬ್ಬರು ಹಿಜ್ಬುಲ್ ಉಗ್ರರು ಬಲಿ

09:41 AM Nov 28, 2019 | Team Udayavani |

ಜಮ್ಮು-ಕಾಶ್ಮೀರ: ಭದ್ರತಾ ಪಡೆಗಳ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಇಬ್ಬರು ಹಿಜ್ಬುಲ್ ಮುಜಾಹಿದೀನ್ ಉಗ್ರರನ್ನು ಹತ್ಯೆಗೈದಿರುವ ಘಟನೆ ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದಿದೆ.

Advertisement

ಪುಲ್ವಾಮಾದಲ್ಲಿ ಸೇನಾಪಡೆ ಗಸ್ತು ನಡೆಸುತ್ತಿದ್ದ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆ ನಡೆಸಿದ ದಾಳಿಗೆ ಇಬ್ಬರು ಉಗ್ರರು ಬಲಿಯಾಗಿರುವುದಾಗಿ ವರದಿ ತಿಳಿಸಿದೆ.

ಹಿಜ್ಬುಲ್ ಮುಜಾಹಿದೀನ್ ಉಗ್ರಗಾಮಿ ಸಂಘಟನೆಯ ಇರ್ಫಾನ್ ಅಹ್ಮದ್ ಹಾಗೂ ಇರ್ಫಾನ್ ಶೇಕ್ ಎನ್ ಕೌಂಟರ್ ಗೆ ಬಲಿಯಾಗಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ. 2017ರಲ್ಲಿ ಇರ್ಫಾನ್ ಅಹ್ಮದ್ ನನ್ನು ಹಿಜ್ಬುಲ್ ಮುಜಾಹಿದೀನ್ ಉಗ್ರಗಾಮಿ ಸಂಘಟನೆಯ ವಾಂಟೆಡ್ ಪಟ್ಟಿಯಲ್ಲಿ ಸೇರಿಸಲಾಗಿತ್ತು. ಶೇಕ್ ಕೂಡಾ ರಿಯಾಝ್ ನೈಕೂ ಎಂಬಾತನ ನಿಕಟವರ್ತಿಯಾಗಿದ್ದು, ಈತ 2016ರಲ್ಲಿಯೇ ಭಯೋತ್ಪಾದನಾ ಸಂಘಟನೆಯಲ್ಲಿ ಸಕ್ರಿಯನಾಗಿದ್ದ. ಅಲ್ಲದೇ ಈತನನ್ನು ಎ ಕೆಟಗರಿ ಉಗ್ರ ಎಂದು ಪರಿಗಣಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next