Advertisement
ಪುತ್ತೂರು ಮೂಲದ ಬೆಂಗಳೂರಿನ ಒಬ್ಬರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಒಟ್ಟು ಕೋವಿಡ್ ಪ್ರಕರಣ 9ಕ್ಕೆ ಏರಿಕೆ ಕಂಡಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ.
ದ.ಕ.ದಲ್ಲಿ ಕೋವಿಡ್ ದೃಢಪಟ್ಟ ಮೂವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರು ಖಾಸಗಿ ಮತ್ತು ಒಬ್ಬರು ಸರಕಾರಿ ಆಸ್ಪತ್ರೆ ಯಲ್ಲಿ ಐಸಿಯುನಲ್ಲಿದ್ದಾರೆ. ಇಬ್ಬರು ಗೃಹ ನಿಗಾವಣೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Related Articles
ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ| ತಿಮ್ಮಯ್ಯ “ಉದಯವಾಣಿ’ಗೆ ಪ್ರತಿಕ್ರಿಯಿಸಿ, ಜಿಲ್ಲೆಯಲ್ಲಿ ಸಾವನ್ನಪ್ಪಿ ರುವ ಜಾರ್ಝಂಡ್ ಮೂಲದ 40 ವರ್ಷದ ವ್ಯಕ್ತಿಯ ಗಂಟಲ ದ್ರವ ಮಾದರಿಯನ್ನು ಪುಣೆಯ ಜಿನೋಮಿಕ್ ಸೀಕ್ವೆನ್ಸಿಂಗ್ ಲ್ಯಾಬ್‌ಗ ಕಳುಹಿಸಲಾಗಿದೆ. ವರದಿ ಬಂದ ಬಳಿಕವಷ್ಟೇ ಕೋವಿಡ್ ರೂಪಾಂತರಿ ಜೆಎನ್.1 ವೈರಸ್ ಇದೆಯೇ ಎಂದು ದೃಢಪಡಲಿದೆ ಎಂದು ತಿಳಿಸಿದ್ದಾರೆ.
Advertisement
ಉಡುಪಿಯಲ್ಲಿ ಶೂನ್ಯಉಡುಪಿ: ಜಿಲ್ಲೆಯಲ್ಲಿ ಸೋಮ ವಾರ 94 ಜನರನ್ನು ಕೋವಿಡ್ ಪರೀಕ್ಷೆಗೊಳಪಡಿಸ ಲಾಗಿದ್ದು, ಯಾರಲ್ಲೂ ಸೋಂಕು ಪತ್ತೆಯಾಗಿಲ್ಲ. ಜಿಲ್ಲೆಯಲ್ಲಿ ಪ್ರಸ್ತುತ ಪಾಸಿಟಿವ್ ಪ್ರಕರಣಗಳಿಲ್ಲ.