Advertisement

Nipah Virus: ಕೇರಳದಲ್ಲಿ ನಿಫಾ ವೈರಸ್‌ ನಿಂದಾಗಿ ಇಬ್ಬರ ಸಾವು-ತೀವ್ರ ನಿಗಾ: ಕೇಂದ್ರ ಸರ್ಕಾರ

06:47 PM Sep 12, 2023 | Team Udayavani |

ನವದೆಹಲಿ: ಕೇರಳದ ಕೋಝಿಕೋಡ್‌ ಜಿಲ್ಲೆಯಲ್ಲಿ ಇಬ್ಬರು ನಿಫಾ ವೈರಸ್‌ ನಿಂದ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವ ಮನ್‌ ಸುಖ್‌ ಮಾಂಡವ್ಯ ಮಂಗಳವಾರ (ಸೆ.12) ಖಚಿತಪಡಿಸಿದ್ದಾರೆ.

Advertisement

ಇದನ್ನೂ ಓದಿ:ಸಿದ್ಧರಾಮಯ್ಯ ಜೀವಂತ ಬಂದರೂ ಬಿಜೆಪಿಗೆ ಸೇರಿಸಿಕೊಳ್ಳಲ್ಲ: ಯತ್ನಾಳ

ಇನ್ನೂ ನಾಲ್ಕು ಮಂದಿ ನಿಫಾ ವೈರಸ್‌ ಸೋಂಕಿಗೆ ಒಳಗಾಗಿರುವುದಾಗಿ ಶಂಕಿಸಲಾಗಿದ್ದು, ಅವರ ಸ್ಯಾಂಪಲ್ಸ್‌ ಅನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿರುವುದಾಗಿ ಸಚಿವ ಮಾಂಡವ್ಯ ತಿಳಿಸಿದ್ದಾರೆ.

ಕೇರಳದಲ್ಲಿ ಇಬ್ಬರು ಅಸಹಜ ಸಾವಿನಿಂದ ಸಾವನ್ನಪ್ಪಿದ್ದು, ನಿಫಾ ವೈರಸ್‌ ಭೀತಿ ಹೆಚ್ಚಿಸಿರುವುದಾಗಿ ಈ ಮೊದಲು ವರದಿಯಾಗಿತ್ತು. ಇದೀಗ ಜ್ವರದಿಂದ ಬಳಲುತ್ತಿದ್ದ ಇಬ್ಬರು ನಿಫಾ ವೈರಸ್‌ ನಿಂದ ಸಾವನ್ನಪ್ಪಿರುವುದಾಗಿ ಕೇಂದ್ರ ಸಚಿವ ಮಾಂಡವ್ಯ ದೃಢಪಡಿಸಿದ್ದು, ಈ ನಿಟ್ಟಿನಲ್ಲಿ ನಿಫಾ ವೈರಸ್‌ ಭೀತಿಯನ್ನು ಹೆಚ್ಚುವಂತೆ ಮಾಡಿರುವುದಾಗಿ ವರದಿ ತಿಳಿಸಿದೆ.

ನಿಫಾ ವೈರಸ್‌ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೇರಳಕ್ಕೆ ಕೇಂದ್ರದ ಆರೋಗ್ಯ ಇಲಾಖೆ ತಂಡವನ್ನು ಕಳುಹಿಸಿದ್ದು, ಪರಿಸ್ಥಿತಿಯನ್ನು ಅವಲೋಕಿಸಿ ರಾಜ್ಯ ಸರ್ಕಾರಕ್ಕೆ ನಿಫಾ ವೈರಸ್‌ ನಿರ್ವಹಣೆ ಕುರಿತು ನೆರವು ನೀಡುವಂತೆ ತಿಳಿಸಿರುವುದಾಗಿ ಮಾಂಡವ್ಯ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

Advertisement

ಕೇರಳದಲ್ಲಿ 2018 ಹಾಗೂ 2021 ರಲ್ಲಿ ಬಾವಲಿಗಳಿಂದ ಹರಡುವ ನಿಫಾ ವೈರಸ್‌ ಹತ್ತಾರು ಸಾವು ನೋವುಗಳಿಗೆ ಕಾರಣವಾಗಿತ್ತು. ಕೋಝಿಕ್ಕೋಡ್ ನಲ್ಲಿ ಈ ಹಿಂದೆ ಕೂಡ ನಿಫಾ ವೈರಸ್‌ ಪ್ರಕರಣಗಳು ಪತ್ತೆಯಾಗಿತ್ತು.

ಬಾವಲಿಗಳು ಕಚ್ಚಿದ ಹಣ್ಣನ್ನು ಸೇವಿಸಿದರೆ ಈ ವೈರಸ್‌ ಹರಡುತ್ತದೆ. ವ್ಯಕ್ತಿಯಿಂದ ವ್ಯಕ್ತಿಗೆ ಹಾಗೂ ಪ್ರಾಣಿಗಳಿಗೂ ವೇಗವಾಗಿ ನಿಫಾ ವೈರಸ್‌ ಹರಡುತ್ತದೆ. ಇದು ಉಸಿರಾಟದ ತೊಂದರೆ, ತಲೆನೋವು, ಸ್ನಾಯು ಸೆಳೆತದಂತಹ ಲಕ್ಷಣಗಳನ್ನು ಒಳಗೊಂಡಿರುತ್ತದೆ.

Advertisement

Udayavani is now on Telegram. Click here to join our channel and stay updated with the latest news.

Next