ಶ್ರೀನಗರ:ಜೈಶ್ ಎ ಮೊಹಮ್ಮದ್ ಸಂಘಟನೆಯ ಇಬ್ಬರು ಉಗ್ರರನ್ನು ಭದ್ರತಾ ಪಡೆ ಎನ್ ಕೌಂಟರ್ ನಲ್ಲಿ ಹೊಡೆದುರುಳಿಸಿರುವ ಘಟನೆ ಜಮ್ಮು-ಕಾಶ್ಮೀರದ ಬದ್ಗಾಮ್ ಜಿಲ್ಲೆಯಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ.
ಜಮ್ಮು-ಕಾಶ್ಮೀರ ಪೊಲೀಸರ ಮಾಹಿತಿ ಪ್ರಕಾರ, ಈ ಘಟನೆ ಮಂಗಳವಾರ (ಅಕ್ಟೋಬರ್ 27, 2020) ರಾತ್ರಿ ಬದ್ಗಾಮ್ ಜಿಲ್ಲೆಯ ಅರಿಬಾಗ್ ಮೌಚ್ವಾ ಪ್ರದೇಶದಲ್ಲಿ ನಡೆದಿರುವುದಾಗಿ ತಿಳಿಸಿದೆ.
ಉಗ್ರರು ಸ್ಥಳದಲ್ಲಿ ಬೀಡು ಬಿಟ್ಟಿರುವ ಬಗ್ಗೆ ಖಚಿತ ಮಾಹಿತಿ ಪಡೆದ ನಂತರ ಜಮ್ಮು-ಕಾಶ್ಮೀರ ಪೊಲೀಸರು, 50ನೇ ರಾಷ್ಟ್ರೀಯ ರೈಫಲ್ಸ್ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ(ಸಿಆರ್ ಪಿಎಫ್) ಜಂಟಿಯಾಗಿ ಪ್ರದೇಶವನ್ನು ಸುತ್ತುವರಿದು ಕಾರ್ಯಾಚರಣೆ ನಡೆಸಲಾಗಿತ್ತು ಎಂದು ವರದಿ ಹೇಳಿದೆ.
ಇದನ್ನೂ ಓದಿ:ಭಾರತ-ಆಸೀಸ್ ಸರಣಿ: ದಿನಾಂಕ ನಿಗದಿಪಡಿಸಿದ ಕ್ರಿಕೆಟ್ ಆಸ್ಟ್ರೇಲಿಯಾ: ಇಲ್ಲಿದೆ ವೇಳಾಪಟ್ಟಿ !
ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದರು, ಇದಕ್ಕೆ ಪ್ರತಿಯಾಗಿ ಪೊಲೀಸರು ಮತ್ತು ಭದ್ರತಾ ಪಡೆ ನಡೆಸಿದ ಎನ್ ಕೌಂಟರ್ ಗೆ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.